ಗೌರಿಹಬ್ಬದಂದು ಎತ್ತಿನಹೊಳೆ ಯೋಜನೆಗೆ ಸಿಎಂ ಸಿದ್ದರಾಮಯ್ಯರಿಂದ ಚಾಲನೆ

blank

ಬೆಂಗಳೂರು: ಬರಪೀಡಿತ ಏಳು ಜಿಲ್ಲೆಗಳಿಗೆ ನೀರೊದಗಿಸುವ ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿ ಪೂರ್ಣಗೊಂಡಿದೆ. ಎತ್ತಿನಹೊಳೆ ಯೋಜನೆಯ ಮೊದಲ ಹಂತವನ್ನು ಸೆಪ್ಟೆಂಬರ್​ 6 ಗೌರಿ ಹಬ್ಬದಂದು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ.

blank

ಇದನ್ನು ಓದಿ: ಅತ್ಯಾಚಾರ ವಿರೋಧಿ ಕಾನೂನು ಜಾರಿಗೆ ಮುಂದಾದ ಸರ್ಕಾರ; ಟಿಎಂಸಿ ನಿರ್ಧಾರಕ್ಕೆ ಬಿಜೆಪಿ ಬೆಂಬಲ

3 ಸಾವಿರ ಕ್ಯೂಸೆಕ್ ಲಿಫ್ಟ್​ ಸಾಮರ್ಥದಲ್ಲಿ ಒಂದೂವರೆ ಸಾವಿರ ಕ್ಯೂಸೆಕ್​ ನೀರನ್ನು ಮೊದಲ ಹಂತದಲ್ಲಿ ಲಿಫ್ಟ್​ ಮಾಡಲಾಗುವುದು. ಪ್ರಸ್ತುತ ವಿಯರ್​ 1, 4 ಮತ್ತು 5ರಿಂದ ನೀರನ್ನು ವಿತರಣಾ ತೊಟ್ಟಿ 3ಕ್ಕೆ ಪೂರೈಸಲಾಗುವುದು. ಬಳಿಕ ವಿತರಣಾ ತೊಟ್ಟಿ 3ರಿಂದ ನೀರನ್ನೆತ್ತಿ ವಿತರಣಾ ತೊಟ್ಟಿ 4ರ ಮುಖಾಂತರ ಗುರುತ್ವ ಕಾಲುವೆಗೆ ಹರಿಸಲು ಯೋಜಿಸಲಾಗಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದ ಮೇಲ್ಭಾಗದಲ್ಲಿ ಹರಿಯುವ ಎತ್ತಿನಹೊಳೆ, ಕಾಡುಮನೆಹೊಳೆ, ಕೇರಿಹೊಳೆ ಮತ್ತು ಹೊಂಗದಹಳ್ಳದಿಂದ ಬರಪೀಡಿತ 7 ಜಿಲ್ಲೆಗಳಿಗೆ ನೀರು ಹರಿಸುವ ಯೋಜನೆ ಇದಾಗಿದೆ. ಮುಂಗಾರು ಅವಧಿಯಲ್ಲಿ ಅಂದ್ರೆ 139 ದಿನ ಸುಮಾರು 24.01 ಟಿಎಂಸಿ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರಿಗೆ ಹರಿಸಲಾಗುತ್ತದೆ

7 ಬರಪೀಡಿತ ಜಿಲ್ಲೆಗಳ 29 ತಾಲೂಕಿನ 38 ಪಟ್ಟಣ ಹಾಗೂ 6 ಸಾವಿರದ 657 ಗ್ರಾಮಗಳಿಗೆ ನೀರನ್ನು ಒದಗಿಸುವುದು ಎತ್ತಿನಹೊಳೆ ಯೋಜನೆಯ ಮುಖ್ಯ ಉದ್ದೇಶವಾಗಿದೆ. 2047ರ ಮಾರ್ಚ್​ 31ರೊಳಗೆ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯನ್ನು ಪೂರ್ಣಗೊಳಿಸಲು ಸರ್ಕಾರ ನಿರ್ಧರಿಸಿದೆ.

blank

ಹಲವು ಕಾರಣಗಳಿಂದ ವಿವಾದಕ್ಕೆ ಗುರಿಯಾಗಿದ್ದ ಎತ್ತಿನಹೊಳೆ ಯೋಜನೆಯು 2014ರಲ್ಲಿ ಆರಂಭಗೊಂಡಿತು. ಸತತ 10 ವರ್ಷಗಳ ಬಳಿಕ ಎತ್ತಿನಹೊಳೆ ಮೊದಲ ಹಂತದ ಯೋಜನೆಯ ದೀರ್ಘ ಕಾಮಗಾರಿ ಪೂರ್ಣಗೊಂಡಿದೆ. ಗೌರಿಹಬ್ಬದ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಯನ್ನ ಲೋಕಾರ್ಪಣೆ ಮಾಡಲಿದ್ದಾರೆ. (ಏಜೆನ್ಸೀಸ್​​)

ಕಮ್ಯುನಿಸ್ಟರಿಗೆ ಇರುವ ಸ್ವಾತಂತ್ರ್ಯ ನಮಗಿಲ್ಲ; ಬಿಟೌನ್​​ ಕ್ವೀನ್​ ಹೀಗೆಳಿದ್ದೇಕೆ

Share This Article

ಮುಖದ ಸೌಂದರ್ಯಕ್ಕೆ ಐಸ್​​ಕ್ಯೂಬ್.. ಕೂಲ್.. ಕೂಲ್! ಐಸ್‌ಕ್ಯೂಬ್‌ನಿಂದ ಸೌಂದರ್ಯದ ಆರೈಕೆ.. Ice Facial Benefits

Ice Facial Benefits:  ಮಹಿಳಯರು ಸೌಂದರ್ಯಪ್ರಿಯರು. ತಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳಲು ಹಾಗೂ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು  ಮಾರುಕಟ್ಟೆಯಲ್ಲಿ…

ಮೇಕೆ ಹಾಲು ಕುಡಿಯುವುದರಿಂದ ಆಗುವ ಅದ್ಭುತ ಪ್ರಯೋಜನಗಳೇನು ಗೊತ್ತಾ?Goat Milk Health Benefits

Goat Milk Health Benefits :  ಸಾಮಾನ್ಯವಾಗಿ ನಾವು ಹಸುವಿನ ಹಾಲು ಅಥವಾ ಎಮ್ಮೆ ಹಾಲು…

ಪೋಷಕರೇ ಹುಷಾರ್‌! ಯಾವುದೇ ಕಾರಣಕ್ಕೂ ಮಕ್ಕಳ ಮುಂದೆ ಈ 5 ವಿಚಾರ ಮಾತನಾಡಲೇಬೇಡಿ… Parents Tips

Parents Tips : ಮಕ್ಕಳಿರುವ ಮನೆ ಎಷ್ಟು ಸುಂದರವಾಗಿರುತ್ತದೆ ಎಂಬುದನ್ನು ವಿಶೇಷವಾಗಿ ಹೇಳಬೇಕಾಗಿಲ್ಲ. ಆರು ವರ್ಷದವರೆಗೆ…