20.8 C
Bangalore
Sunday, December 8, 2019

ಜಲ ಯೋಜನೆಗಳಿಗೆ ಹಿನ್ನಡೆ?

Latest News

ಪತಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದ ಪತ್ನಿಯ ಸೆರೆ

ಕೆಜಿಎಫ್: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯನ್ನೇ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಗೈದ ಪತ್ನಿ ಮತ್ತು ಪ್ರಿಯಕರನನ್ನು ಉರಿಗಾಂ...

ಅರಣ್ಯ ಸರ್ವೆಗೆ ಡ್ರೋನ್: ರಾಜ್ಯದಲ್ಲೇ ಮೊದಲ ಬಾರಿಗೆ ಹೊಸನಗರದಲ್ಲಿ ಪ್ರಾಯೋಗಿಕವಾಗಿ ಜಾರಿ

ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಪ್ರದೇಶ ಗುರುತಿಸಲು ಪ್ರಾಯೋಗಿಕವಾಗಿ ಹೊಸನಗರ ತಾಲೂಕಿನಲ್ಲಿ ಅರಣ್ಯ ಇಲಾಖೆ ಡ್ರೋನ್ (ಏರಿಯಲ್) ಸರ್ವೆ ನಡೆಸಿದ್ದು, ಯಶಸ್ವಿಯಾದರೆ ಇಲಾಖೆಯ...

ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ಸಾಮಾಜಿಕ ಸಾಮರಸ್ಯ,ರಾಷ್ಟ್ರೀಯ ಏಕತೆಗೆ ತಿಂಗಳಿಗೂ ಹೆಚ್ಚು ಕಾಲ ಜಿಲ್ಲಾದ್ಯಂತ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆಗೆ ಶನಿವಾರ ಚಿತ್ರದುರ್ಗದ ಹಳೇ...

ಭಗವದ್ಗೀತೆ ಪಠಣದಿಂದ ಅಜ್ಞಾನ ದೂರ

ಚಿಕ್ಕಬಳ್ಳಾಪುರ: ಚಿಕ್ಕ ವಯಸ್ಸಿನಿಂದಲೇ ಮಕ್ಕಳನ್ನು ಒಳ್ಳೆಯ ವಾತಾವರಣದಲ್ಲಿ ಬೆಳೆಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಹಾತ್ಮಗಾಂಧಿ ಸೇವಾಟ್ರಸ್ಟ್ ಸಂಸ್ಥಾಪಕ ಶ್ರೀ ವಿನಯ್ ಗುರೂಜಿ ಅಭಿಪ್ರಾಯಪಟ್ಟರು. ತಾಲೂಕಿನ...

ನಾಯಿಂದ್ರಹಳ್ಳಿ ವಿವಾದಿತ ರಸ್ತೆ ಸರ್ವೇ

ಚಿಂತಾಮಣಿ: ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಿಂದ್ರಹಳ್ಳಿ ರಸ್ತೆ ವಿವಾದ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳು ಸರ್ವೇ ನಂ.2 ವ್ಯಾಪ್ತಿಯ 5.04...

| ಕೆ. ರಾಘವ ಶರ್ಮ

ನವದೆಹಲಿ: ರಾಜ್ಯದ ಎತ್ತಿನಹೊಳೆ ಮತ್ತು ಮಹದಾಯಿ ನೀರು ತಿರುಗಿಸುವ ಯೋಜನೆಗೆ ಹಿನ್ನಡೆಯಾಗಲಿದೆಯೇ? ಇಂಥದ್ದೊಂದು ಪ್ರಶ್ನೆಯನ್ನು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ಆದೇಶ ಹುಟ್ಟುಹಾಕಿದೆ.

ಡಾ. ಕಸ್ತೂರಿ ರಂಗನ್ ವರದಿ ಕುರಿತು ಫೆಬ್ರವರಿ 2017ರ ಅಧಿಸೂಚನೆ ಮರು ಪ್ರಕಟಿಸಬೇಕು ಮತ್ತು ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ ಗಳಲ್ಲಿ ಕಾಮಗಾರಿ ಯೋಜನೆಗಳಿಗೆ ಸಮ್ಮತಿ ನೀಡಬಾರದು ಎಂದು ಕೇಂದ್ರ ಪರಿಸರ-ಅರಣ್ಯ ಇಲಾಖೆಗೆ ಆದೇಶಿಸಿದ್ದೇ ಈ ಗೊಂದಲಕ್ಕೆ ಕಾರಣ ಆಗಿದೆ.

ಈ ಮಧ್ಯಂತರ ಆದೇಶ ಆಧರಿಸಿ ಗೋವಾ ಸರ್ಕಾರ ಮಹದಾಯಿ ನೀರು ತಿರುಗಿಸುವುದನ್ನು ವಿರೋಧಿಸಿ ಹಸಿರು ನ್ಯಾಯಾಧಿಕರಣಕ್ಕೆ ಅರ್ಜಿ ಸಲ್ಲಿಸಲಿದೆ ಎಂದು ತಿಳಿದುಬಂದಿದೆ. ಮಹದಾಯಿಯಿಂದ ಮಲಪ್ರಭಾಗೆ ನೀರು ತಿರುಗಿಸಿದರೆ ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿನ ಮಹದಾಯಿ ಅಭಯಾರಣ್ಯ ಹಾಗೂ ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ ಭಾರಿ ಅನಾಹುತ ಸೃಷ್ಟಿಯಾಗಲಿದೆ ಎಂಬುದನ್ನು ಮಹದಾಯಿ ನ್ಯಾಯಾಧಿಕರಣವೇ ಹೇಳಿದೆ. ಇದಕ್ಕೆ ಪೂರಕವಾಗಿ ಕೇರಳ-ಕೊಡಗು ದುರಂತಗಳೇ ಸಾಕ್ಷಿ ಎಂದು ಗೋವಾ ಪ್ರತಿಪಾದಿಸುವ ಸಾಧ್ಯತೆ ಇದೆ.

ಮಹದಾಯಿಯ ಕಳಸಾ ಬಂಡೂರಿ ಯೋಜನೆ, ಜಲ ವಿದ್ಯುತ್ ಯೋಜನೆಗಳಿಗೆ ಸಂಬಂಧಿಸಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಹೊಸದಾಗಿ ಸಮಗ್ರ ಯೋಜನಾ ವರದಿ ಸಲ್ಲಿಸಿ ಪರಿಸರ ಇಲಾಖೆ ಸಮ್ಮತಿ ಪಡೆಯಬೇಕಿದೆ. ಆದರೆ, ಪರಿಸರದ ಬಗ್ಗೆ ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕ ಕಿಂಚಿತ್ತೂ ಕಾಳಜಿ ಪ್ರದರ್ಶಿಸಿಲ್ಲ ಎಂದು ನ್ಯಾಯಾಧಿಕರಣ ತೀರ್ಪಿನಲ್ಲಿ ದಾಖಲಿಸಿರುವುದರಿಂದ ಹಸಿರು ನ್ಯಾಯಾಧಿಕರಣದಲ್ಲಿನ ಮುಂದಿನ ಬೆಳವಣಿಗೆಗಳ ಬಗ್ಗೆ ಕುತೂಹಲ ಮೂಡಿದೆ.

ರಾಜ್ಯದ ಸಕಲೇಶಪುರ ಬಳಿಯ ಎತ್ತಿನಹೊಳೆ ಯೋಜನೆ ಪ್ರದೇಶದಲ್ಲೂ ಭಾರಿ ಮಳೆಗೆ ಭೂಕುಸಿತ ವಾಗಿದೆ. ನೇತ್ರಾವತಿ ನದಿ ನೀರು ತಿರುಗಿಸುವ ಯೋಜನೆ ಯಿಂದಲೇ ಅನಾಹುತಗಳು ಸಂಭವಿಸಿವೆ ಎಂದು ಭೂ-ಪರಿಸರ ತಜ್ಞರು ವಾದಿಸುತ್ತಿದ್ದಾರೆ.

‘ಮಿತಿ’ ಕಂಟಕ

ಆರಂಭದಲ್ಲಿ ಎತ್ತಿನಹೊಳೆ ಯೋಜನೆಗೆ ಷರತ್ತುಬದ್ಧ ಅನುಮತಿ ನೀಡಿದ್ದ ಎನ್​ಜಿಟಿ ನಂತರ ಪ್ರಕರಣದ ಮರು ವಿಚಾರಣೆ ನಡೆಸುವುದಾಗಿ ತಿಳಿಸಿತ್ತು. ಹೀಗಾಗಿ, ಈ ಪ್ರಕರಣದಲ್ಲಿ ಅಂತಿಮ ತೀರ್ಪು ಇನ್ನೂ ಹೊರಬೀಳಬೇಕಿದೆ. ಏತನ್ಮಧ್ಯೆ, ಎತ್ತಿನಹೊಳೆ-ಮಹದಾಯಿ ಯೋಜನೆಗಳು ಕುಡಿವ ನೀರಿನ ಯೋಜನೆಗಳಾಗಿವೆ ಎಂಬುದು ಉಲ್ಲೇಖಾರ್ಹ. ಆದರೆ, 20,000 ಚ.ಕಿ.ಮೀ. ವ್ಯಾಪ್ತಿಯ ಒಳಗೆ ಮಾತ್ರ ಕಾಮಗಾರಿ ಯೋಜನೆಗಳಿರಬೇಕು ಎಂದು ಕಸ್ತೂರಿ ರಂಗನ್ ವರದಿಯಲ್ಲಿ ‘ಮಿತಿ’ ನಿಗದಿಪಡಿಸಲಾಗಿದ್ದು,ಈ 2 ಯೋಜನೆಗಳು ಈ ಮಿತಿ ದಾಟಿವೆ ಎನ್ನಲಾಗಿದೆ. ಕುಡಿವ ನೀರು ಪೂರೈಕೆಗಾಗಿ ಎಂದು ಈ 2 ಯೋಜನೆ ಕೇಂದ್ರದಿಂದ ರಾಜ್ಯ ಅನುಮತಿ ಪಡೆಯುವ ಅವಕಾಶವಿದ್ದರೂ, ಕೇರಳ-ಕೊಡಗು ಸ್ಥಿತಿ ಕಂಡು ನಿರ್ಧಾರ ಬದಲಿಸಲೂಬಹದು ಎಂಬುದು ರಾಜ್ಯದ ಅಧಿಕಾರಿಯೊಬ್ಬರ ಅಭಿಪ್ರಾಯ.

ಎನ್​ಜಿಟಿ ಮಧ್ಯಂತರ ಆದೇಶ ಪಶ್ಚಿಮ ಘಟ್ಟಗಳ ರಕ್ಷಣೆ ವಿಷಯದಲ್ಲಿ ಹೊಸ ಆಶಾಕಿರಣ. ಪರಿಸರ ತಜ್ಞರಾದ ನಮ್ಮ ವಕೀಲ ರಿತ್ವಿಕ್ ದತ್ತ ಅವರನ್ನು ಈಗಾಗಲೇ ಸಂರ್ಪಸಿದ್ದೇವೆ. ಕೆಲವೇ ದಿನಗಳಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿ, ಎತ್ತಿನಹೊಳೆ ಪ್ರದೇಶ ರಕ್ಷಣೆಗೆ ಎನ್​ಜಿಟಿಯನ್ನು ಕೋರಲಿದ್ದೇವೆ.

| ಕೆ.ಎನ್. ಸೋಮಶೇಖರ್, ಸಾಮಾಜಿಕ-ಪರಿಸರ ಹೋರಾಟಗಾರ

Stay connected

278,744FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...