ಒಂದು ಧರ್ಮಕ್ಕೆ ಸೀಮಿತವಲ್ಲ : ಡಾ.ಸಂತೋಷ್ ಆಲ್ಬರ್ಟ್ ಸಲ್ಡಾನ್ಹ ಅನಿಸಿಕೆ

New Project (30)
Published on

ಬೆಳ್ತಂಗಡಿ: ಯೋಗ ಒಂದು ಸಿದ್ಧಿ. ಇದು ಯಾವುದೇ ಒಂದು ಧರ್ಮಕ್ಕೆ ಸೀಮಿತವಲ್ಲ. ಇದು ಸರ್ವವ್ಯಾಪಿಯಾಗಿದ್ದು ಎಲ್ಲ ಕಾಯಿಲೆಗಳಿಗೂ ರಾಮಬಾಣವಾಗಿದೆ ಎಂದು ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾಂಶುಪಾಲ ಡಾ.ಸಂತೋಷ್ ಆಲ್ಬರ್ಟ್ ಸಲ್ಡಾನ್ಹ ಹೇಳಿದರು.

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದ್ವಿತೀಯ ಬಿ.ಎಡ್‌ನ ಪ್ರಶಿಕ್ಷಣಾರ್ಥಿ ದಾಕ್ಷಾಯಣಿ, ವಿದ್ಯಾರ್ಥಿ ಸಂಘ ಉಪನಾಯಕಿ ಸಾಯಿಧೃತಿ, ಉಪನ್ಯಾಸಕ ವೃಂದದವರು ಹಾಗೂ ಪ್ರಥಮ ಮತ್ತು ದ್ವಿತೀಯ ಬಿ.ಎಡ್ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ಮಹಾಂತೇಶ್ ಸ್ವಾಗತಿಸಿದರು. ರಕ್ಷಿತಾ ವಂದಿಸಿದರು. ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net