

ಕಡಬ: ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆ ಶನಿವಾರ ನಡೆಯಿತು.
ಪುತ್ತೂರು ಸಿಟಿ ಆಸ್ಪತ್ರೆಯ ಆಯುರ್ವೇದ ಯೋಗ ಕನ್ಸಲ್ಟೆಂಟ್ ವೈದ್ಯರಾದ ಡಾ.ಚೇತನಾ ಗಣೇಶ್ ಮಾತನಾಡಿ, ಯೋಗ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿರಬೇಕು. ಈಗಿನ ಮಕ್ಕಳು ದೈಹಿಕವಾಗಿ ಸಬಲರಾಗಿದ್ದರೂ ಮಾನಸಿಕವಾಗಿ ದುರ್ಬಲರಾಗಿದ್ದಾರೆ. ಹಾಗಾಗಿ ಮಕ್ಕಳು ಹಲವಾರು ದುಶ್ಚಟಗಳಿಗೆ ಬಲಿಯಾಗುತ್ತಿದ್ದು, ಅಂತಹ ಸಮಸ್ಯೆಗಳ್ನು ಔಷಧಗಳಿಲ್ಲದೆ ಯೋಗದ ಮೂಲಕ ಪರಿಹರಿಸಲು ಸಾಧ್ಯ ಎಂದರು.
ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಉದ್ಘಾಟಿಸಿದರು. ಸಂಸ್ಥೆ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ, ಎಸ್.ಎನ್.ಆರ್. ರೂರಲ್ ಎಜುಕೇಶನ್ ಟ್ರಸ್ಟ್ ಸದಸ್ಯರಾದ ರಶ್ಮಿ ಅಶ್ವಿನ್ ಶೆಟ್ಟಿ, ರಕ್ಷಕ ಶಿಕ್ಷಕ ಸಂಘ ಉಪಾಧ್ಯಕ್ಷ ರಾಮ್ ಪ್ರಸಾದ್ ರೈ ಕಲಾಯಿ, ಪ್ರಾಂಶುಪಾಲೆ ಶಶಿಕಲಾ ಎಸ್.ಆಳ್ವ ಉಪಸ್ಥಿತರಿದ್ದರು. ಸಂವಿಧಾನದ ಪೀಠಿಕೆಯನ್ನು ಧನ್ವಿತ್ ವಾಚಿಸಿದರು. ಶ್ರದ್ಧಾ ಸ್ವಾಗತಿಸಿದರು. ಆಯಿಷತ್ ಹನ್ನಾ ವಂದಿಸಿದರು. ಫಾತಿಮತ್ ಹನ್ನ ಕಾರ್ಯಕ್ರಮ ನಿರೂಪಿಸಿದರು.