ವಿಜಯವಾಣಿಯಿಂದ 21ರಂದು ಯೋಗ ದಿನ

ಬೆಂಗಳೂರು: ಪ್ರತಿ ವರ್ಷದಂತೆ ಈ ವರ್ಷವೂ ನಂ.1 ಕನ್ನಡ ದಿನಪತ್ರಿಕೆ ವಿಜಯವಾಣಿ ಮತ್ತು ದಿಗ್ವಿಜಯ 247 ನ್ಯೂಸ್ ವತಿಯಿಂದ ಜೂ. 21ರಂದು ರಾಜ್ಯಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಗುತ್ತಿದ್ದು, ಆಸಕ್ತ ಸಂಘ-ಸಂಸ್ಥೆಗಳು ಹೆಸರು ನೋಂದಾಯಿಸಿಕೊಂಡು ಕಾರ್ಯಕ್ರಮದಲ್ಲಿ ಕೈಜೋಡಿಸಬಹುದು.

‘ಆರೋಗ್ಯಕ್ಕಾಗಿ ಯೋಗ’ ಶೀರ್ಷಿಕೆಯಡಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶಿಕ್ಷಕರಾಗಿ, ಆಯೋಜಕರಾಗಿ, ಸಾಮೂಹಿಕ ಯೋಗಾಸನ ದಲ್ಲಿ ಪಾಲ್ಗೊಳ್ಳುವವರು ಹೆಸರು ನೋಂದಾಯಿಸಬಹುದು. ವಿಳಾಸ: ‘ವಿಜಯವಾಣಿ’ ದಿನಪತ್ರಿಕೆ, ನಂ. 24, ಶ್ರೀ ಸಾಯಿರಾಂ ಟವರ್ಸ್, ಮೊದಲ ಮಹಡಿ, 5ನೇ ಮುಖ್ಯರಸ್ತೆ, ಚಾಮರಾಜಪೇಟೆ, ಬೆಂಗಳೂರು-18. ದೂ: 88844 32666. ಇಮೇಲ್: ಡ್ಟ್ಝಚಜ್ಝಿಢಃಜಞಚಜ್ಝಿ.ಟಞ

16ರಂದು ಯೋಗ ಪೂರ್ವಾಭ್ಯಾಸ

ವಿಶ್ವ ಯೋಗ ದಿನಾಚರಣೆ ಅಂಗವಾಗಿ ಎಸ್​ಪಿವೈಎಸ್​ಎಸ್ ಜೂ.21ರಂದು ಸಾಮೂಹಿಕ ಯೋಗ ಪ್ರದರ್ಶನ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ದೇವರಚಿಕ್ಕನಹಳ್ಳಿ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಜೂ.16ರ ಬೆಳಗ್ಗೆ 5.45ರಿಂದ 7.30ರವರೆಗೆ ಯೋಗ ಪೂರ್ವಾಭ್ಯಾಸ ಕಾರ್ಯಕ್ರಮ ಏರ್ಪಡಿಸಿದೆ. ಸಂಸದ ತೇಜಸ್ವಿ ಸೂರ್ಯ ಸೇರಿ ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಲಿದ್ದು, ಸಾರ್ವಜನಿಕರಿಗೆ ಮುಕ್ತ ಆಹ್ವಾನ ನೀಡಲಾಗಿದೆ.