ದೇರಳಕಟ್ಟೆ ಯೆನೆಪೋಯ ವಿವಿಯಲ್ಲಿ ಯೋಗೋತ್ಸವ : 520 ಮಂದಿಯಿಂದ ಯೋಗಾಭ್ಯಾಸ : ತಜ್ಞರಿಂದ ಉಪನ್ಯಾಸ

New Project (1)
Published on

ಉಳ್ಳಾಲ: ಭಾರತ ಸರ್ಕಾರದ ಆಯುಷ್ ಸಚಿವಾಲಯ ಆಶ್ರಯದಲ್ಲಿ ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆ ಸಹಕಾರದಲ್ಲಿ 100 ದಿನಗಳು, 100 ನಗರಗಳು, 100 ಸಂಸ್ಥೆಗಳು ಕಾರ್ಯಕ್ರಮ ಪ್ರಯುಕ್ತ ಯೆನೆಪೋಯ(ಪರಿಗಣಿತ) ವಿಶ್ವವಿದ್ಯಾಲಯದ ಘಟಕ ನರಿಂಗಾನದ ಯೆನೆಪೋಯ ಪ್ರಕೃತಿ ಚಿಕಿತ್ಸೆ, ಯೋಗಿಕ್ ಸೈನ್ಸ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಶನಿವಾರ ದೇರಳಕಟ್ಟೆ ಯೆನೆಪೋಯ ವಿಶ್ವವಿದ್ಯಾಲಯ ಕ್ಯಾಂಪಸ್ ಯೆಂಡ್ಯುರೆನ್ಸ್ ಸಭಾಂಗಣದಲ್ಲಿ ಯೋಗ ಕಾರ್ಯಕ್ರಮ ‘ಯೋಗೋತ್ಸವ-2025’ ನಡೆಯಿತು.

ಉದ್ಘಾಟನಾ ಸಮಾರಂಭದಲ್ಲಿ ದ.ಕ. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್ ಕೆ., ಅಲೈಡ್ ಹೆಲ್ತ್‌ಕೇರ್ ಕೌನ್ಸಿಲ್ ಕರ್ನಾಟಕ ಅಧ್ಯಕ್ಷ ಡಾ.ಯು.ಟಿ.ಇಫ್ತಿಕರ್ ಅಲಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಮಹಮ್ಮದ್ ಇಕ್ಬಾಲ್, ಕೋಟೆಕಾರ್ ಪಪಂ ಉಪಾಧ್ಯಕ್ಷ ಪ್ರವೀಣ್ ಬಗಂಬಿಲ ಭಾಗವಹಿಸಿದರು. ವಿದ್ಯಾರ್ಥಿಗಳು, ವೈದ್ಯರು, ಆಹ್ವಾನಿತರು ಮತ್ತು ಸ್ಥಳೀಯ ನಾಗರಿಕರ ಸಹಿತ 520 ಮಂದಿ ಯೋಗಾಭ್ಯಾಸದಲ್ಲಿ ಪಾಲ್ಗೊಂಡರು.

ಯೆನೆಪೋಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನದ ಎಲ್ಲ ವಿದ್ಯಾರ್ಥಿಗಳಿಗೆ ‘ಒಂದು ಭೂಮಿಗೆ ಯೋಗ, ಒಂದು ಆರೋಗ್ಯ’ ಎಂಬ ವಿಷಯದಲ್ಲಿ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪ್ರಸನ್ನ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಸ್ವಸ್ಥ ವೃತ್ತ ಮತ್ತು ಯೋಗ ವಿಭಾಗದ ಪ್ರಾಧ್ಯಾಪಕಿ ಡಾ.ವೃಂದಾ ಬೆಡೇಕರ್ ‘ಯೋಗ ಜಾಗತಿಕ ಸ್ವಾಸ್ಥ್ಯಕ್ಕೆ ಮಾರ್ಗ’ ಕುರಿತು ಮಾತನಾಡಿದರು. ನೆಲಮಂಗಲದ ಸೋಲೂರಿನ ರಾಜಶೇಖರಯ್ಯ, ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಸಂಸ್ಥೆ ಪ್ರಾಂಶುಪಾಲ ಡಾ.ಕಿರಣ್ ಕುಮಾರ್ ರೆಡ್ಡಿ ಅವರು ‘ಯೋಗ ಜೀವನಶೈಲಿಯ ಮೂಲಕ ಆಂತರಿಕ ಸಾಮರಸ್ಯ’ ವಿಷಯದಲ್ಲಿ ಮಾತನಾಡಿದರು.

ಯೆನೆಪೋಯ ವಿಶ್ವವಿದ್ಯಾಲಯ ಅಕಾಡೆಮಿಕ್ ಡೀನ್ ಡಾ.ಅಶ್ವಿನಿ ದತ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಡಾ.ಪುನೀತ್ ರಾಘವೇಂದ್ರ ಸ್ವಾಗತಿಸಿದರು. ಸಹಪ್ರಾಧ್ಯಾಪಕಿ ಡಾ.ಸಂಗೀತಲಕ್ಷ್ಮೀ ಎಂ.ಜೆ. ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net