

ವಿಜಯವಾಣಿ ಸುದ್ದಿಜಾಲ ಹೆಬ್ರಿ
ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಅವಶ್ಯಕ. ದಿನನಿತ್ಯವೂ ಯೋಗಾಸನ ಮಾಡುವ ಮೂಲಕ ಆರೋಗ್ಯವಂತರಾಗಿ ಬಾಳೋಣ. ವಿದ್ಯಾರ್ಥಿಗಳು ಪ್ರತಿನಿತ್ಯ ಯೋಗಾಭ್ಯಾಸ ಮಾಡುವುದರಿಂದ ಏಕಾಗ್ರತೆ ಹೆಚ್ಚಳವಾಗಿ ಆತ್ಮವಿಶ್ವಾಸ ಬೆಳೆಸಿಕೊಂಡು ಕಲಿಕೆಯಲ್ಲೂ ಹೆಚ್ಚಿನ ಸಾಧನೆ ಮಾಡಲು ಸಾಧ್ಯ ಎಂದು ಮುದ್ರಾಡಿ ಗ್ರಾಪಂ ಅಧ್ಯಕ್ಷೆ ವಸಂತಿ ಪೂಜಾರಿ ಹೇಳಿದರು.
ಮುದ್ರಾಡಿ ಎಂ.ಎನ್.ಡಿ.ಎಸ್.ಎಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಯೋಗಾಸನ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ಕಾರ್ಕಳ ವಲಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವಿಚಂದ್ರ ಕಾರಂತ, ಆಡಳಿತ ಮಂಡಳಿ ಖಜಾಂಚಿ ಡಾ. ಎಂ.ಎಸ್.ರಾವ್, ಕಾರ್ಕಳ ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ ಅಧ್ಯಕ್ಷ ಸಂಜೀವ ಪೂಜಾರಿ, ಕಾರ್ಕಳ ತಾಲೂಕು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಅಧ್ಯಕ್ಷ ಸಂತೋಷ ಶೆಟ್ಟಿ, ಕಾರ್ಕಳ ತಾಲೂಕು ಪ್ರಾಥಮಿಕ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಅಧ್ಯಕ್ಷ ಪಾಂಡುರಂಗ ಆಚಾರ್ಯ, ಕಾರ್ಕಳ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷೆ ವೀಣಾ ಆರ್., ಕಾರ್ಕಳ ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಮಹೇಶ್ ನಾಯ್ಕ, ರಕ್ಷಕ ಶಿಕ್ಷಕ ಸಮಿತಿ ಅಧ್ಯಕ್ಷ ಸುರೇಶ್ ಕುಲಾಲ್, ಅಂತಾರಾಷ್ಟ್ರೀಯ ಯೋಗ ಗುರು ನರೇಂದ್ರ ಕಾಮತ್, ರಕ್ಷಕ ಶಿಕ್ಷಕ ಸಮಿತಿ ಸದಸ್ಯೆ ಸುಮತಿ ಭಟ್, ಯೋಗ ತೀರ್ಪುಗಾರರು ಉಪಸ್ಥಿತರಿದ್ದರು.
ಆಡಳಿತ ಮಂಡಳಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕಿ ಇಂದಿರಾ ಬಾಯರಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಘುಪತಿ ಹೆಬ್ಬಾರ್ ವಂದಿಸಿ, ಆಂಗ್ಲ ಭಾಷಾ ಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ ಕಾರ್ಯಕ್ರಮ ನಿರೂಪಿಸಿದರು.
ಸಂಜೆ ಸಮಾರೋಪದ ಅಧ್ಯಕ್ಷತೆಯನ್ನು ಮುಖ್ಯಶಿಕ್ಷಕಿ ಇಂದಿರಾ ಬಾಯರಿ ವಹಿಸಿದ್ದರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಅಂತಾರಾಷ್ಟ್ರೀಯ ಯೋಗ ಗುರು ನರೇಂದ್ರ ಕಾಮತ್ ಮಾರ್ಗದರ್ಶನದಲ್ಲಿ ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ಯೋಗ ಶಿಕ್ಷಕರ ಸಹಕಾರದಿಂದ ಕಾರ್ಯಕ್ರಮ ನಡೆಯಿತು. ಮುದ್ರಾಡಿ ಗ್ರಾಪಂ ಉಪಾಧ್ಯಕ್ಷೆ ರಮ್ಯಾಕಾಂತಿ, ಪಂಚಾಯಿತಿ ಸದಸ್ಯರಾದ ಗಣಪತಿ ಎಂ., ಸನತ್ ಕುಮಾರ್, ಶಿಕ್ಷಕಿ ಶ್ಯಾಮಲಾ ಕೊಠಾರಿ ಸ್ವಾಗತಿಸಿ, ಶಿಕ್ಷಕ ಪಿ.ವಿ.ಆನಂದ್ ಇದ್ದರು.