More

    ಯೋಗಾ ನರಸಿಂಹಸ್ವಾಮಿ ರಥೋತ್ಸವ

    ಅರಕಲಗೂಡು; ಇತಿಹಾಸ ಪ್ರಸಿದ್ಧ ಗೊರೂರು ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯದ ರಥೋತ್ಸವ ಶುಕ್ರವಾರ ಸಂಭ್ರಮದಿಂದ ನೆರವೇರಿತು.

    ರಥೋತ್ಸವ ಪ್ರಯುಕ್ತ ದೇವಾಲಯದಲ್ಲಿ ಕಳೆದ ಕೆಲ ದಿನಗಳಿಂದ ಪೂಜಾ ವಿಧಾನಗಳು ವಿಧಿವತ್ತಾಗಿ ನೆರವೇರಿದ್ದವು. ರಥಸಪ್ತಮಿ ದಿನವಾದ ಶುಕ್ರವಾರ ಬೆಳಗ್ಗೆ ದೇವರಿಗೆ ಅಭಿಷೇಕ, ಸೂರ್ಯ ಮಂಡಲೋತ್ಸವ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಯಿತು.

    ಬಳಿಕ ಶುಭ ಮುಹೂರ್ತದಲ್ಲಿ ದೇವರ ಉತ್ಸವ ಮೂರ್ತಿಯನ್ನು ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿಸಿ ಅಲಂಕೃತ ರಥದಲ್ಲಿ ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ನೂರಾರು ಭಕ್ತರ ಜಯಘೋಷದ ನಡುವೆ ರಥೋತ್ಸವ ಜರುಗಿತು. ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ತೇರಿನತ್ತ ಭಕ್ತರು ಹಣ್ಣು ದವನ ಎಸೆದು ಭಕ್ತಿ ಮೆರೆದರು. ಮಂಗಳವಾದ್ಯ, ವಿವಿಧ ಕಲಾ ತಂಡಗಳು, ಕಲಾವಿದರು ಮೆರವಣಿಗೆಯಲ್ಲಿ ಪಾಲ್ಗೊಂಡು ರಥೋತ್ಸವದ ಮೆರುಗು ಹೆಚ್ಚಿಸಿದರು. ಗೊರೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದು ಪುನೀತರಾದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts