ಎ.ಜೆ.ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಯೋಗಾಭ್ಯಾಸ

New Project (34)
Published on

ಉಳ್ಳಾಲ: ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಕುಂಟಿಕಾನ ಎ.ಜೆ.ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಶಿಷ್ಟಾಚಾರದ ಯೋಗಾಭ್ಯಾಸ ಯಶಸ್ವಿಯಾಗಿ ನಡೆಯಿತು.

ಈ ವರ್ಷದ ಒಂದು ಭೂಮಿ, ಒಂದು ಆರೋಗ್ಯ ಎಂಬ ವಿಷಯಕ್ಕೆ ಅನುಗುಣವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ತಲಪಾಡಿಯ ಶಾರದಾ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವೈದ್ಯಕೀಯ ಕಾಲೇಜು ವತಿಯಿಂದ ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಇನ್ ಯೋಗ ಆ್ಯಂಡ್ ನ್ಯಾಚುರೋಪತಿ ಸಹಯೋಗದೊಂದಿಗೆ 100 ವೈದ್ಯಕೀಯ ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಯೋಗ ದಿನದ ಶಿಷ್ಟಾಚಾರದ ಪ್ರಾತ್ಯಕ್ಷಿಕೆ ಮತ್ತು ತರಬೇತಿ ನೀಡಲಾಯಿತು.

ಎ.ಜೆ.ವೈದ್ಯಕೀಯ ವಿಜ್ಞಾನಗಳು ಮತ್ತು ಸಂಶೋಧನಾ ಕೇಂದ್ರದ ಡೀನ್ ಡಾ.ಅಶೋಕ್ ಹೆಗ್ಡೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಎ.ಜೆ.ಅಲೈಡ್ ಹೆಲ್ತ್‌ಸೈನ್ಸ್‌ನ ಸಹಾಯಕ ಡೀನ್ ಮತ್ತು ಪ್ರಾಂಶುಪಾಲ ಡಾ.ಸುಶಿತ್ ಉಪಸ್ಥಿತರಿದ್ದರು. ಶಾರದಾ ಯೋಗ, ಪ್ರಕೃತಿ ಚಿಕಿತ್ಸಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಉಪಪ್ರಾಂಶುಪಾಲೆ ಡಾ.ಲತಾಮಣಿ ಕೆ. ಅಧ್ಯಕ್ಷತೆ ವಹಿಸಿದ್ದರು.

ಜ್ಯೋತ್ಸ್ನಾ ಮತ್ತು ಡಾ.ಶರತ್ ಕೆಪಿಎಂ ಕಾರ್ಯಕ್ರಮ ಸಂಘಟಿಸಿದ್ದರು. ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಬಿ.ಪುರಾಣಿಕ್, ಎ.ಜೆ.ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕರಾದ ಡಾ.ಅಮಿತಾ ಮಾರ್ಲ ಸಂದೇಶ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net