ಮಾನಸಿಕ ಆರೋಗ್ಯಕ್ಕೆ ಯೋಗಾಭ್ಯಾಸ ಅಗತ್ಯ

hbr (4)
Published on

ಹೆಬ್ರಿ: ಮಾನಸಿಕ ಆರೋಗ್ಯಕ್ಕೆ ಯೋಗಾಭ್ಯಾಸ ಅನಿವಾರ್ಯ. ಯೋಗಾಸನ ಮಾಡುವ ವ್ಯಕ್ತಿಗೆ ರೋಗ ಬಾಧಿಸುವುದಿಲ್ಲ ಎಂದು ನಿವೃತ್ತ ಶಿಕ್ಷಕ ಮುದ್ರಾಡಿ ಗಣಪತಿ ಪೈ ಅಭಿಪ್ರಾಯಪಟ್ಟರು. ಹೆಬ್ರಿ ಪಿಆರ್‌ಎನ್ ಅಮೃತಭಾರತಿ ಆಂಗ್ಲ ಮಾಧ್ಯಮ ವಿದ್ಯಾಲಯದಲ್ಲಿ ಆಯೋಜಿಸಿದ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಳಿಕ ವಿವಿಧ ಆಸನಗಳನ್ನು ಪ್ರದರ್ಶಿಸಲಾಯಿತು. ಸಂಸ್ಥೆಯ ಮುಖ್ಯಸ್ಥೆ ಅಪರ್ಣಾ ಆಚಾರ್, ದೈಹಿಕ ಶಿಕ್ಷಣ ಶಿಕ್ಷಕ ನಿಶಾನ್ ಶೆಟ್ಟಿ, ಬೋಧಕರು ಉಪಸ್ಥಿತರಿದ್ದರು .ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್ ಹೆಗ್ಡೆ ಸ್ವಾಗತಿಸಿದರು. ವೇದವ್ಯಾಸ ತಂತ್ರಿ ಮಡಾಮಕ್ಕಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net