

ಕುಂದಾಪುರ: ಬಿಜೆಪಿ ಕುಂದಾಪುರ ಮಂಡಲ ವತಿಯಿಂದ ಇಲ್ಲಿನ ಕುಂದೇಶ್ವರ ದೇವಸ್ಥಾನದ ಆವರಣದಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಶನಿವಾರ ನಡೆಯಿತು.
ವಿಕಸಿತ ಭಾರತ ಸಂಕಲ್ಪದ ಜಿಲ್ಲಾ ಸಂಚಾಲಕ ರಾಜೇಶ್ ಕಾವೇರಿ ಗಿಡಕ್ಕೆ ನೀರೆರೆಯುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ವಿಕಸಿತ ಭಾರತ ಸಂಕಲ್ಪ ಕಾರ್ಯಕ್ರಮದ ಕುಂದಾಪುರ ಮಂಡಲ ಸಂಚಾಲಕ ಸುನಿಲ್ ಶೆಟ್ಟಿ ಹೇರಿಕುದ್ರು ಮಾತನಾಡಿದರು.
ಬಿಜೆಪಿ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯರು ಹಾಗೂ ಶ್ರೀ ಪತಂಜಲಿ ಯೋಗ ಸಮಿತಿ ಮುಖ್ಯಶಿಕ್ಷಕ ವಿವೇಕ್ ಪೈ ಯೋಗಾಸನ, ಪ್ರಾಣಾಯಾಮ ಮತ್ತು ಧ್ಯಾನದ ತರಬೇತಿ ನೀಡಿದರು.
ಕುಂದಾಪುರ ಮಂಡಲ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಕಾಂಚನ್, ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ರೋಹಿಣಿ ಪೈ ಮತ್ತಿತರರು ಉಪಸ್ಥಿತರಿದ್ದರು.