More

    ಯೋಗದಿಂದ ಒತ್ತಡ ನಿವಾರಣೆ : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ ಅಭಿಮತ

    ಚಿಕ್ಕಬಳ್ಳಾಪುರ: ಕೆಲಸದ ಒತ್ತಡಗಳನ್ನು ನಿಭಾಯಿಸಲು ಹಾಗೂ ಉತ್ತಮ ಆರೋಗ್ಯಕ್ಕೆ ಯೋಗಾಭ್ಯಾಸ ಉಪಯುಕ್ತವಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಅಭಿಪ್ರಾಯಪಟ್ಟರು.

    ಆಜಾದಿ ಕಾ ಅಮೃತ ಮಹೋತ್ಸವ ಮತ್ತು ರಾಷ್ಟ್ರೀಯ ಪೋಷಣ್ ಮಾಸಾಚರಣೆ ಅಂಗವಾಗಿ ಇತ್ತೀಚಿಗೆ ಜಿಲ್ಲಾಡಳಿತ ಭವನದ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಇತ್ತೀಚೆಗೆ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆಯುಷ್ ಇಲಾಖೆ ಕೈಗೊಂಡಿದ್ದ ಉದ್ಯೋಗಸ್ಥರಿಗೆ ಯೋಗ ತರಬೇತಿಯಲ್ಲಿ ಮಾತನಾಡಿದರು. ಯೋಗ ಮಾಡಿದರೆ ರೋಗ ಬರುವುದಿಲ್ಲ ಎಂಬುದು ಸತ್ಯ. ಇದು ಕಳೆದ 5 ವರ್ಷಗಳಿಂದಲೂ ರೂಢಿಸಿಕೊಂಡಿರುವ ಎರಡು ತಾಸಿನ ಯೋಗಾಭ್ಯಾಸದಿಂದ ವೈಯಕ್ತಿಕವಾಗಿ ಅನುಭವಕ್ಕೆ ಬಂದಿದೆ ಎಂದರು.

    ಜಿಲ್ಲೆಯಲ್ಲಿ ಸಾಮಾನ್ಯ ಅಪೌಷ್ಟಿಕತೆಯ 5,200 ಮತ್ತು ತೀವ್ರ ಅಪೌಷ್ಟಿಕತೆಯ 87 ಮಕ್ಕಳಿದ್ದಾರೆ. ಇವರಿಗೆ ಪೌಷ್ಟಿಕ ಆಹಾರಗಳನ್ನು ನೀಡಿ, ಆರೋಗ್ಯವನ್ನು ಕಾಪಾಡಬೇಕು. ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ನಿಯಮಾನುಸಾರ ಪದಾರ್ಥಗಳು ಪೂರೈಕೆಯಾಗುತ್ತಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
    ಶಿಶು ಮತ್ತು ಚಿಕ್ಕ ಮಕ್ಕಳ ಆಹಾರ ಪದ್ಧತಿಗಳ ಹಾಗೂ ಸ್ತನ್ಯಪಾನ ಮಹತ್ವದ ಕುರಿತು ಜಾಗೃತಿ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts