ಹುಬ್ಬಳ್ಳಿ: ಇಲ್ಲಿಯ ಗೋಕುಲ ರಸ್ತೆ ಪದ್ಮರಾಜನಗರದ ಅದ್ವೆತ ವಿದ್ಯಾಶ್ರಮ ಟ್ರಸ್ಟ್‌ನ ಶ್ರೀ ಪ್ರಣವಾನಂದ ತೀರ್ಥ ಸ್ವಾಮೀಜಿಗಳಿಂದ ಅನುವಾದಿತ ಯೋಗವಾಸಿಷ್ಠ ಗ್ರಂಥದ ಲೋಕಾರ್ಪಣೆ ಹಾಗೂ ಸ್ವಾಮೀಜಿಗಳ ಸಹಸ್ರಚಂದ್ರ ದರ್ಶನ ಕಾರ್ಯಕ್ರಮ ಮಾರ್ಚ್ 2 ಹಾಗೂ 3ರಂದು ಏರ್ಪಡಿಸಲಾಗಿದೆ.
ಮಾ. 2ರಂದು ಬೆಳಗ್ಗೆ 9ಕ್ಕೆ ಶ್ರೀ ಶಂಕರಾನಂದತೀರ್ಥ ಸ್ವಾಮೀಜಿ ಸಮಾಧಿಗೆ ರುದ್ರಾಭಿಷೇಕ, ವಿವಿಧ ಧಾಮಿರ್ಕ ಕಾರ್ಯಕ್ರಮಗಳು ನಡೆಯಲಿದೆ.
ಸಂಜೆ 5.30ಕ್ಕೆ ಇಲ್ಲಿಯ ಡಾ. ಕೆ.ಎಸ್. ಶರ್ಮಾ ಸಭಾಭವನದಲ್ಲಿ ಯೋಗವಾಸಿಷ್ಠ ಗ್ರಂಥ ಲೋಕಾರ್ಪಣೆ ನಡೆಯಲಿದೆ. ಕನೇರಿಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ, ಶಿವಮೊಗ್ಗದ ಶ್ರೀ ಬ್ರಹ್ಮಾನಂದತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಂಜೆ 7ಕ್ಕೆ ಸಾಂಸತಿಕ ಕಾರ್ಯಕ್ರಮ ನಡೆಯಲಿವೆ.
ಮಾ. 3ರಂದು ಬೆಳಗ್ಗೆ 8ಕ್ಕೆ ಶ್ರೀ ಪ್ರಣವಾನಂದತೀರ್ಥ ಸ್ವಾಮೀಜಿಗಳ ಸಹಸ್ರ ಚಂದ್ರದರ್ಶನ ಶಾಂತಿ ಹಾಗೂ ತುಲಾಭಾರ, ಮಧ್ಯಾಹ್ನ 12ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ. ಭಕ್ತರು ಪಾಲ್ಗೊಳ್ಳಬೇಕೆಂದು ಪ್ರಕಟಣೆ ಕೋರಿದೆ.