

ಧಾರವಾಡ: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತದಾನದಲ್ಲಿ ಭಾಗವಹಿಸಲು ಹೈಕೋರ್ಟ್ ಏಕಸದಸ್ಯ ಪೀಠ ಮಂಗಳವಾರ ಮಧ್ಯಾಹ್ನ ಅನುಮತಿ ನೀಡಿದೆ.
ವಿನಯ್ ಕುಲಕರ್ಣಿ ಅವರು ನೇರವಾಗಿ ಮತದಾನ ಕೇಂದ್ರಕ್ಕೆ ಹೋಗಿ ಮತ ಚಲಾಯಿಸಿ ನಂತರ ನೇರವಾಗಿ ಧಾರವಾಡ ಜಿಲ್ಲೆ ಬಿಟ್ಟು ಹೋಗಬೇಕು ಎಂದು ನ್ಯಾಯಮೂರ್ತಿ ಎಂ.ಜಿ. ಉಮಾ ನಿರ್ದೇಶಿಸಿದ್ದಾರೆ.
ಮತದಾನಕ್ಕೆ ಅವಕಾಶ ಕೋರಿದ್ದ ವಿನಯ್ ಕುಲಕರ್ಣಿ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿತ್ತು. ಧಾರವಾಡ ಪ್ರವೇಶ ಕೋರಿದ್ದ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ನಿರ್ಬಂಧ ಹೇರಿತ್ತು.
ಇದೀಗ ವಿನಯ್ ಕುಲಕರ್ಣಿ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಾಲಯ, ಮತದಾನಕ್ಕೆ ಅವಕಾಶ ನೀಡಿದೆ. ಶಿಗ್ಗಾಂವಿ, ಹುಬ್ಬಳ್ಳಿ ಮಾರ್ಗವಾಗಿ ವಿನಯ ಕುಲಕರ್ಣಿ ಸಂಜೆ 4.30ರ ಸುಮಾರಿಗೆ ಧಾರವಾಡದ ಶಾರದಾ ಹೈಸ್ಕೂಲ್ ಮತಗಟ್ಟೆಗೆ ಆಗಮಿಸುವ ನಿರೀಕ್ಷೆ ಇದೆ.