More

    ಯೋಗೇಶ್ ಗೌಡ ಕೊಲೆ ಕೇಸ್: ಕುಲಕರ್ಣಿ ಸಹೋದರರಿಗೆ ಸಿಬಿಐ ಶಾಕ್​

    ಹುಬ್ಬಳ್ಳಿ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದ್ದು, ಬೆಳ್ಳಂಬೆಳಗ್ಗೆಯೇ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದು ಧಾರವಾಡ ಉಪನಗರ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಿದ್ದರು. ಇದೇ ರೀತಿ ಶಾಕ್​ ಅನ್ನು ಅವರ ಸಹೋದರ ವಿಜಯ್ ಕುಲಕರ್ಣಿ ಅವರಿಗೂ ನೀಡಿದ್ದು, ಹುಬ್ಬಳ್ಳಿಯ ಪ್ರಗತಿ ಕಾಲನಿಯಲ್ಲಿರುವ ವಿಜಯ್ ಮನೆಗೆ ತೆರಳಿ ಅವರನ್ನೂ ವಶಕ್ಕೆ ತೆಗೆದುಕೊಂಡು ಉಪನಗರ ಠಾಣೆಗೆ ಕರೆದೊಯ್ದಿದ್ದಾರೆ.

    ಅಲ್ಲಿ ಇಬ್ಬರನ್ನೂ ಒಟ್ಟಿಗೆ ಕೂರಿಸಿ ವಿಚಾರಣೆ ಮುಂದುವರಿಸಿದ್ದಾರೆ. ವಿಜಯ್ ಕುಲಕರ್ಣಿ ಅವರನ್ನು ಕರೆದೊಯ್ಯುವಾಗ ಶರ್ಟ್​ ಬದಲಾಯಿಸಿ ಬರುವುದಾಗಿ ಮನವಿ ಮಾಡಿಕೊಂಡರು. ಅದಕ್ಕೆ ಅವಕಾಶ ನೀಡಿದ ಅಧಿಕಾರಿಗಳು, ಬಳಿಕ ಅವರನ್ನು ಕರೆದೊಯ್ದಿದ್ದಾರೆ.

    ಇದನ್ನೂ ಓದಿ: ಯೋಗೀಶ್ ಗೌಡ ಕೊಲೆ ಪ್ರಕರಣ: ಹಾವೇರಿ ಎಎಸ್ಪಿ ಮಲ್ಲಿಕಾರ್ಜುನ್ ವಿಚಾರಣೆ

    ಇದೇ ವೇಳೆ, ಕುಲಕರ್ಣಿ ಸಹೋದರರನ್ನು ಬಂಧಿಸಿರುವ ವಿಚಾರ ಬಹಿರಂಗವಾಗುತ್ತಿದ್ದಂತೆ ಉಪನಗರ ಪೊಲೀಸ್ ಠಾಣೆ ಎದುರು ಅವರ ಬೆಂಬಲಿಗರು ಬಂದು ಸೇರಿದ್ದಾರೆ. ಧಾರವಾಡ ಜಿಲ್ಲಾ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲ್ ಕುಮಾರ ಪಾಟೀಲ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಮತ್ತು ಅವರ ಬೆಂಬಲಿಗರೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಠಾಣೆ ಸುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

    ಯೋಗೇಶ್ ಗೌಡ ಕೊಲೆ ಕೇಸ್: ಮಾಜಿ ಸಚಿವ ವಿನಯ ಕುಲಕರ್ಣಿ ಸಿಬಿಐ ವಶಕ್ಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts