More

    ಸಿಬಿಐ ಕಸ್ಟಡಿಗೆ ವಿನಯ್​ ಕುಲಕರ್ಣಿ

    ಹುಬ್ಬಳ್ಳಿ: ಕೊಲೆ ಕೇಸ್​ ಸಂಬಂಧ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ, ಕಾಂಗ್ರೆಸ್​ ಮುಖಂಡ ವಿನಯ್ ಕುಲಕರ್ಣಿಯನ್ನು ಮೂರು ದಿನ ಸಿಬಿಐ ಕಸ್ಟಡಿಗೆ ನೀಡಿ ಧಾರವಾಡ ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆದೇಶ ಪ್ರಕಟಿಸಿದೆ.

    2016ರ ಜೂನ್ 15ರಂದು ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡರ ಕೊಲೆಯಾಗಿತ್ತು. ಈ ಸಂಬಂಧ ವಿಚಾರಣೆ ಕೈಗೆತ್ತಿಕೊಂಡಿರುವ ಸಿಬಿಐ, ಕೊಲೆ ಕೇಸ್​ನಲ್ಲಿ ವಿನಯ್​ ಕುಲಕರ್ಣಿ ಕೈವಾಡವಿರುವ ಮತ್ತು ಪ್ರಭಾವ ಬಳಸಿ ಕೇಸು ಮುಚ್ಚಿ ಹಾಕಿರುವ ಆರೋಪದ ಮೇರೆಗೆ ಗುರುವಾರ ಬೆಳಗ್ಗೆ ಬಂಧಿಸಿ ಸಂಜೆವರೆಗೂ ವಿಚಾರಣೆಗೆ ಒಳಪಡಿಸಿತ್ತು. ಬಳಿಕ 2ನೇ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಆರೋಪಿ ವಿನಯ್​ ಕುಲಕರ್ಣಿಯನ್ನು ಶುಕ್ರವಾರ ಸಂಜೆವರೆಗೂ(24 ತಾಸು) ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದರು. ಅದರಂತೆ ಆರೋಪಿಯನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ರವಾನಿಸಲಾಗಿತ್ತು.

    ಹೆಚ್ಚಿನ ತನಿಖೆಗಾಗಿ ತನ್ನ ಕಸ್ಟಡಿಗೆ ಆರೋಪಿ ವಿನಯ್​ ಕುಲಕರ್ಣಿಯನ್ನು ನೀಡುವಂತೆ ಸಿಬಿಐ ಅಧಿಕಾರಿಗಳು ಕೋರ್ಟ್​ಗೆ ಮನವಿ ಮಾಡಿದ್ದರು. ಸಿಬಿಐ ಅರ್ಜಿಗೆ ವಿನಯ್​ ಪರ ವಕೀಲರು ತಕರಾರು ಅರ್ಜಿ ಸಲ್ಲಿಸಿದ್ದರು.

    ಶುಕ್ರವಾರ ಬೆಳಗ್ಗೆ ವಾದ-ವಿವಾದ ಆಲಿಸಿದ್ದ ನ್ಯಾಯಾಲಯ, ತೀರ್ಪು ಕಾಯ್ದಿರಿಸಿತ್ತು. ಸಂಜೆ ತೀರ್ಪು ಪ್ರಕಟಿಸಿದ ನ್ಯಾಯಾಧೀಶರು, ವಿನಯ್​ ಕುಲಕರ್ಣಿಯನ್ನು ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ಪಡೆಯುವಂತೆ ಸೂಚಿಸಿದರು. ನ.9ರಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಸಿಬಿಐ ಅಧಿಕಾರಿಗಳಿಗೆ ಸೂಚಿಸಿದರು.

    ವಿನಯ್​ ಕುಲಕರ್ಣಿ ಬಂಧನದ ಹಿಂದೆ ಜೋಶಿ ಕೈವಾಡ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts