More

    ಮಾಜಿ ಸಚಿವ ಮತ್ತು ಸೋದರ ಮಾವನಿಗೆ ಸದ್ಯಕ್ಕಿಲ್ಲ ರಿಲೀಫ್​

    ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡರ ಕೊಲೆ ಕೇಸ್​ನಲ್ಲಿ ಸಿಬಿಐ ಪೊಲೀಸರಿಂದ ಬಂಧನಕ್ಕೊಳಪಟ್ಟು, ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್​ ಕುಲಕರ್ಣಿ ಮತ್ತು ಇವರ ಸೋದರ ಮಾವ ಚಂದ್ರಶೇಖರ ಇಂಡಿಗೆ ಸದ್ಯಕ್ಕೆ ಬಿಡುಗಡೆ ಭಾಗ್ಯವಿಲ್ಲ.

    ನ.5ರಂದು ಬಂಧನಕ್ಕೊಳಪಟ್ಟಿದ್ದ ವಿನಯ್​ ಕುಲಕರ್ಣಿ ನ.9ರಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಡಿ.13ರಂದು ಸಿಬಿಐ ಪೊಲೀಸರಿಂದ ಅರೆಸ್ಟ್​ ಆಗಿದ್ದ ಚಂದ್ರಶೇಖರ ಇಂಡಿ ಡಿ.14ರಂದು ಜೈಲು ಪಾಲಾದರು. ಇವರಿಬ್ಬರ ನ್ಯಾಯಾಂಗ ಬಂಧನ ಅವಧಿ ಡಿ.28ಕ್ಕೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಂದು(ಸೋಮವಾರ) ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆದಿದ್ದು, ಮತ್ತೆ 14 ದಿನಗಳವರೆಗೆ ಅಂದರೆ 2020ರ ಜ.8ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್​ ಆದೇಶಿಸಿದೆ. ಇದನ್ನೂ ಓದಿರಿ ರಾಜಕೀಯ ತುಂಬಾ ಕಷ್ಟ… ಎಂದ ಅಣ್ಣಾಮಲೈ!

    2016ರ ಜೂನ್ 15ರಲ್ಲಿ ತನ್ನದೇ ಮಾಲೀಕತ್ವದ ಉದಯ್ ಜಿಮ್​ನಲ್ಲಿ ಯೋಗೀಶ್​ ಗೌಡ ಬರ್ಬರವಾಗಿ ಹತ್ಯೆಯಾಗಿದ್ದರು. ಈ ಸಂಬಂಧ ಸಿಬಿಐ ವಿಚಾರಣೆ ನಡೆಸುತ್ತಿದೆ. ಕೊಲೆ ಕೇಸ್​ನಲ್ಲಿ ವಿನಯ್​ ಕುಲಕರ್ಣಿ ಕೈವಾಡವಿರುವ ಮತ್ತು ಪ್ರಭಾವ ಬಳಸಿ ಕೇಸು ಮುಚ್ಚಿ ಹಾಕಿರುವ ಆರೋಪ ಇದೆ. ಯೋಗೀಶ್​ಗೌಡರ ಹತ್ಯೆಗೆ ಶಸ್ತ್ರಾಸ್ತ್ರ ಪೂರೈಸಿದ ಆರೋಪ ಚಂದ್ರಶೇಖರ ಇಂಡಿ ಮೇಲಿದೆ. ಅಕ್ರಮ ಶಸ್ತ್ರಾಸ್ತ್ರವನ್ನು ಭೀಮಾ ತೀರದಿಂದ ಸಂಗ್ರಹಿಸಲಾಗಿತ್ತು ಎಂದು ತಿಳಿದುಬಂದಿದೆ.

    ಯಾವ ಜಯಂತಿನ್ಲಾ? ಹನುಮ ಹುಟ್ಟಿದ ತಾರೀಖು‌‌ ನಿನಗೆ ಗೊತ್ತಾ? ಸುಮ್ನೆ ಚಿಕನ್​ ತಿನ್ಲಾ: ಸಿದ್ದರಾಮಯ್ಯ

    ನಿವೃತ್ತ ಪೊಲೀಸ್​ ಅಧಿಕಾರಿಯ ಆತ್ಮಹತ್ಯೆ ಹಿಂದಿದೆ ಆ ಮಹಿಳೆ ಕೊಲೆಯ ರಹಸ್ಯ?

    ರಾತ್ರಿಗಿಂತ ಹಗಲಿನಲ್ಲೇ ಕಾಂಡಂ ಮಾರಾಟ ಜಾಸ್ತಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts