ಮದ್ದೂರು: ತಾಲೂಕಿನ ಮಲ್ಲನಕುಪ್ಪೆ ಗ್ರಾಮದ ವಿವಿಧೋದ್ದೇಶ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತರಾದ ಎಸ್.ಯೋಗೇಶ್ ಹಾಗೂ ಉಪಾಧ್ಯಕ್ಷರಾಗಿ ಡಿ.ರವಿಕುಮಾರ್ ಆಯ್ಕೆಯಾದರು.
ಸಂಘದ ಸಭಾಂಗಣದಲ್ಲಿ ಸೋಮವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಎಸ್.ಯೋಗೇಶ್, ಉಪಾಧ್ಯಕ್ಷ ಸ್ಥಾನಕ್ಕೆ ಡಿ.ರವಿಕುಮಾರ್ ಹಾಗೂ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಸದಸ್ಯರಾದ ಎಂ.ರವಿಕುಮಾರ್, ಉಪಾಧ್ಯಕ್ಷ ಸ್ಥಾನಕ್ಕೆ ಬೊಮ್ಮಲಿಂಗಯ್ಯ ನಾಮಪತ್ರ ಸಲ್ಲಿಸಿದ್ದರು, ಅಂತಿಮವಾಗಿ ಚುನಾವಣೆ ನಡೆದು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದ ಕಾಂಗ್ರೆಸ್ ಬೆಂಬಲಿತ ಸದಸ್ಯ ಎಸ್.ಯೋಗೇಶ್ 7, ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದ ಡಿ.ರವಿಕುಮಾರ್ 7 ಮತಗಳನ್ನು ಪಡೆದು ಚುನಾಯಿತರಾದರು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದ ಜೆಡಿಎಸ್ ಬೆಂಬಲಿತ ಸದಸ್ಯರಾದ ಎಂ.ರವಿಕುಮಾರ್, ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದ ಬೊಮ್ಮಲಿಂಗಯ್ಯ ಅವರು ಕ್ರಮವಾಗಿ 5 ಮತಗಳನ್ನು ಪಡೆದು ಸೋಲುಂಡರು. ಚುನಾವಣಾಧಿಕಾರಿ ಸಹಕಾರ ಸಂಘಗಳ ಅಧಿಕಾರಿ ಧರಣೇಂದ್ರ ಕರ್ತವ್ಯ ನಿರ್ವಹಿಸಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಗ್ರಾಪಂ ಅಧ್ಯಕ್ಷೆ ಸವಿತಾ, ಉಪಾಧ್ಯಕ್ಷ ರವಿ, ಸದಸ್ಯೆ ಇಂದ್ರಮ್ಮ, ಮುಖಂಡರಾದ ಕೆಸ್ತೂರು ಕೆ.ದಾಸೇಗೌಡ, ಸಿ.ನಾಗೇಗೌಡ, ಸಿ.ಪಿ.ಅಶೋಕ್, ರಮೇಶ್, ಸಂಘದ ನಿದೇಶಕರಾದ ಗಿರಿಜಮ್ಮ, ಕೃಷ್ಣ, ಮರಿಲಿಂಗಯ್ಯ, ಪುಟ್ಟಸ್ವಾಮಿ, ವರದಯ್ಯ ಇತರರು ಇದ್ದರು.