ಸಾರ್ವಜನಿಕ ಸೇವಾ ಸಂಖ್ಯೆಗೆ ಕರೆ ಮಾಡಿ ಯೋಗಿ ಆದಿತ್ಯನಾಥ್​ಗೆ ಜೀವ ಬೆದರಿಕೆ ಹಾಕಿದ ಭೂಪ!

Yogi Adithyanath 2 Feb 20
Published on

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ ಬಂದಿದ್ದು ಈ ಹಿನ್ನೆಲೆಯಲ್ಲಿ ಲಖನೌನಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಯೋಗಿ ಆದಿತ್ಯನಾಥ್​ಗೆ ಬೆದರಿಕೆ ಮಾಡಿದ ಭೂಪ ಯಾರು?!

'ಡಯಲ್ 112' (ಉತ್ತರ ಪ್ರದೇಶ ಸರ್ಕಾರವು ತುರ್ತು ಸೇವೆಗಳಿಗಾಗಿ ಪ್ರಾರಂಭಿಸಿರುವ ಸಂಖ್ಯೆ) ಸಂದೇಶದ ಮೂಲಕ ಬೆದರಿಕೆ ಹಾಕಲಾಗಿದೆ. ಅದರಲ್ಲಿ "ನಾನು ಸಿಎಂ ಯೋಗಿಯನ್ನು ಶೀಘ್ರದಲ್ಲೇ ಕೊಲ್ಲುತ್ತೇನೆ" ಎಂದು ವ್ಯಕ್ತಿ ಹೇಳಿದ್ದಾನೆ. ಬೆದರಿಕೆ ಬಂದ ನಂತರ, '112' ನ ಆಪರೇಷನ್ ಕಮಾಂಡರ್ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 506, 507 ಮತ್ತು ಐಟಿ ಕಾಯ್ದೆ 66 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪಿಎಸ್ ಸುಶಾಂತ್ ಗಾಲ್ಫ್ ಸಿಟಿಯಲ್ಲಿ 506 ಮತ್ತು 507 ಐಪಿಸಿ ಮತ್ತು 66 ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಅ.24ರಂದು ಕೊಚ್ಚಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕ್ಸೇವಿಯರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net