More

    ಕುತೂಹಲ ಕೆರಳಿಸಿದ ಪ್ರಧಾನಿ ಮೋದಿ- ಯೋಗಿ ಆದಿತ್ಯನಾಥ್ ಭೇಟಿ; ಒಂದು ಗಂಟೆ ಚರ್ಚೆ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಡುವೆ ಕೆಲವು ವಿಷಯಗಳಲ್ಲಿ ಮನಸ್ತಾಪ ತಲೆದೋರಿದೆ ಎಂಬ ಮಾಧ್ಯಮ ವರದಿಗಳ ಬೆನ್ನಲ್ಲೇ ಇಬ್ಬರೂ ನಾಯಕರು ಶುಕ್ರವಾರ ದೆಹಲಿಯಲ್ಲಿ ಭೇಟಿ ಮಾಡಿ ಒಂದು ಗಂಟೆ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.

    ಇನ್ನು ಏಳೆಂಟು ತಿಂಗಳಲ್ಲಿ ಉತ್ತರಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಎದುರಾಗಲಿದೆ. 2024ರಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದೆಲ್ಲದರ ಹಿನ್ನೆಲೆಯಲ್ಲಿ ಉತ್ತರಪ್ರದೇಶದ ಈಗಿನ ಸರ್ಕಾರದ ವರ್ಚಸ್ಸು ಹೆಚ್ಚಿಸಬೇಕೆಂದರೆ ಸಚಿವ ಸಂಪುಟದಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಇದೇ ಹಿನ್ನೆಲೆಯಲ್ಲಿ ಈ ಇಬ್ಬರೂ ನಾಯಕರು ಚರ್ಚೆ ನಡೆಸಿದರೆಂದು ಹೇಳಲಾಗಿದೆ.

    ಇದೇ ವಿಷಯದ ಚರ್ಚೆಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನೂ ಯೋಗಿ ಆದಿತ್ಯನಾಥ್ ಗುರುವಾರ ಭೇಟಿ ಮಾಡಿದ್ದರು. ಯಾರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕು, ಯಾರನ್ನು ಕೈಬಿಡಬೇಕು ಎಂಬ ವಿಷಯ ಕುರಿತಂತೆ ಮೋದಿ ಹಾಗೂ ಯೋಗಿ ಆದಿತ್ಯನಾಥ್ ಅವರ ಮಧ್ಯೆ ಮನಸ್ತಾಪ ಉಂಟಾಗಿದೆ ಎಂದು ಹೇಳಲಾಗುತ್ತಿತ್ತು. ಇದೇ ಹಿನ್ನೆಲೆಯಲ್ಲಿ ಆದಿತ್ಯನಾಥ್ ದೆಹಲಿ ಪ್ರವಾಸ ಕೈಗೊಂಡಿದ್ದು, ಪಕ್ಷ ಹಾಗೂ ಸರ್ಕಾರದ ಹಿತದೃಷ್ಟಿಯಿಂದ ವರಿಷ್ಠರ ಸಲಹೆಗಳನ್ನು ಒಪ್ಪಿಕೊಳ್ಳುವಂತೆ ಮನವೊಲಿಸುವಲ್ಲಿ ದಿಲ್ಲಿ ನಾಯಕರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡರು ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗಿದೆ.

    ಟಿಎಂಸಿ ತೆಕ್ಕೆಗೆ ಮರಳಿದ ಮುಕುಲ್ ರಾಯ್; ಪಶ್ಚಿಮ ಬಂಗಾಳದಲ್ಲಿ ವಿಭಜನೆಯಾಗುವುದೇ ಬಿಜೆಪಿ?

    2 ತೊಲ ಬಂಗಾರದ ಚೈನ್ ನುಂಗಿದ ನಾಯಿಮರಿ: ವೈದ್ಯರ ಬಳಿ ಕರೆದೊಯ್ದ ಮಾಲೀಕನಿಗೆ ಕಾದಿತ್ತು ಶಾಕ್!​

    ಒಂಟಿ ಕೋಣೆಯಲ್ಲಿ 10 ವರ್ಷ ಪ್ರೇಯಸಿಯನ್ನು ಬಚ್ಚಿಟ್ಟಿದ್ದ ಪ್ರಿಯಕರನಿಂದ ಸ್ಫೋಟಕ ಹೇಳಿಕೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts