More

    ಕುಡಿದ ಮತ್ತಿನಲ್ಲಿ ಸ್ನೇಹಿತನ ಕೊಲೆ

    ಶಿರ್ವ: ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವನನ್ನು ಕೊಲೆಗೈದು, ಮನೆಯಂಗಳದಲ್ಲೇ ಸುಟ್ಟು ಹಾಕಲು ಯತ್ನಿಸಿದ ಘಟನೆ ಬೆಳಪು ಸಮೀಪದ ಪುಂಚಲಕಾಡಿನಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

    ಮೂಳೂರು ಐದು ಸೆಂಟ್ಸ್ ಕಾಲನಿ ನಿವಾಸಿ ಹೇಮಂತ್ ಪೂಜಾರಿ(45) ಕೊಲೆಯಾಗಿರುವ ವ್ಯಕ್ತಿ. ಪುಂಚಲಕಾಡು ನಿವಾಸಿ ಅಲ್ಬನ್ ಡಿ ಸೋಜ(50) ಆರೋಪಿಯಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
    ಇಬ್ಬರೂ ಸ್ನೇಹಿತರಾಗಿದ್ದು, ಜತೆಗೂಡಿ ಕುಡಿಯುವ ಚಟ ಹೊಂದಿದ್ದರು. ಶುಕ್ರವಾರ ಸಂಜೆ ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳವುಂಟಾಗಿದ್ದು, ಬಳಿಕ ಅದು ಕೊಲೆಯಲ್ಲಿ ಅಂತ್ಯ ಕಂಡಿದೆ.

    ಕೊಲೆ ಆರೋಪಿ ಪ್ರಕರಣವನ್ನು ಮುಚ್ಚಿ ಹಾಕುವ ಉದ್ದೇಶದಿಂದ ಮನೆಯ ಅಂಗಳದಲ್ಲೇ ಮರದ ತುಂಡು ಮತ್ತು ಸೋಗೆ ಮಡಲುಗಳನ್ನು ಹಾಕಿ ಶವವನ್ನು ಸುಟ್ಟು ಹಾಕಲು ಯತ್ನಿಸಿದ್ದಾನೆ. ಸ್ಥಳೀಯರು ಸಕಾಲಿಕವಾಗಿ ಶಿರ್ವ ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಆಗಮಿಸಿ ಸಾಕ್ಷೃ ನಾಶ ಪ್ರಯತ್ನವನ್ನು ತಡೆದಿದ್ದಾರೆ.

    ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವಿಷ್ಣುವರ್ಧನ್, ಕಾಪು ಪೊಲೀಸ್ ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್, ಶಿರ್ವ ಎಸ್ಸೈ ಶ್ರೀಶೈಲ ಮುರಗೋಡ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts