More

    ಮುನ್ನುಗ್ಗಿದರೆ ಗುರಿ ತಲುಪಬಹುದು

    ಚಿತ್ರದುರ್ಗ; ಆಧುನಿಕ-ತಂತ್ರಜ್ಞಾನ ಯುಗದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಸ್ಪರ್ಧೆ ಇದ್ದು, ಆತ್ಮವಿಶ್ವಾಸದೊಂದಿಗೆ ಮುನ್ನುಗ್ಗಿದಾಗ ಮಾತ್ರ ಗುರಿ ತಲುಪಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಕಾನೂನು ವಿವಿ ಉಪಕುಲಪತಿ ಪ್ರೊ.ಡಾ.ಸಿ.ಬಸವರಾಜು ಅಭಿಪ್ರಾಯಪಟ್ವರು.

    ವಿಶ್ವವಿದ್ಯಾಲಯ, ಸರಸ್ವತಿ ಕಾನೂನು ಕಾಲೇಜಿನಿಂದ ಗುರುವಾರ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ವಲಯ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ವಿದ್ಯಾರ್ಥಿ ಸಮೂಹ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಶೈಕ್ಷಣಿಕ ಸಂಸ್ಥೆಗಳು ವ್ಯಾಸಂಗದ ಜತೆ ಕಲೆ, ಸಾಂಸ್ಕೃತಿಕ ಸೇರಿ ಹಲವು ಸ್ಪರ್ಧೆ ಆಯೋಜಿಸಬೇಕು. ಇದರಲ್ಲಿ ಸೋಲು-ಗೆಲುವಿಗಿಂತ ಪಾಲ್ಗೊಳ್ಳುವಿಕೆ ಮುಖ್ಯವಾಗಿದ್ದು, ಉತ್ತೇಜನ ನೀಡಬೇಕು ಎಂದು ತಿಳಿಸಿದರು.

    ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಪ್ರತಿಭೆ, ಕೌಶಲ ಇದ್ದರೂ ಅವಕಾಶ ಸಿಗುತ್ತಿಲ್ಲ. ಈ ನಿಟ್ಟಿನಲ್ಲಿ ಯುವಜನೋತ್ಸವ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದ್ದು, ವಂಚಿತರಾದವರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ಯುವಸಮೂಹಕ್ಕೆ ಸಂಸ್ಕೃತಿ-ಸಂಪ್ರದಾಯ, ಆಚಾರ-ವಿಚಾರ ಜಾನಪದ, ಕಲೆ, ಸಾಹಿತ್ಯ ಪರಿಚಯಿಸುವ ಕೆಲಸವಾಗಬೇಕು. ಸೌಹಾರ್ದ, ಸಾಮರಸ್ಯ ಹಾಗೂ ವಿವಿಧ ಸಂಸ್ಕೃತಿಗಳ ಸಮಾಗಮಕ್ಕೂ ಈ ಕಾರ್ಯಕ್ರಮ ಸಹಕಾರಿಯಾಗಿದೆ. ಸಂಸ್ಥೆಯೂ ಸಮಾಜಕ್ಕೆ ಉತ್ತಮ ಪ್ರಜೆ ಹಾಗೂ ಗುಣಮಟ್ಟದ ಶಿಕ್ಷಣ ನೀಡುವ ಧ್ಯೇಯೋದ್ದೇಶ ಹೊಂದಿರುವುದು ಸಂತಸದ ಸಂಗತಿ ಎಂದರು.

    ಸರಸ್ವತಿ ವಿದ್ಯಾಸಂಸ್ಥೆ ಅಧ್ಯಕ್ಷ, ಮಾಜಿ ಸಂಸದ ಎಚ್.ಹನುಮಂತಪ್ಪ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದವರ ಪೈಕಿ ಕೆಲವರು ಇಂದು ಹೈಕೋರ್ಟ್ ನ್ಯಾಯಮೂರ್ತಿಗಳಾಗಿದ್ದಾರೆ. ಮುಂದಿನ ದಿನಗಳಲ್ಲಿ ಸ್ನಾತಕೋತ್ತರ ಪದವಿ ಕೋರ್ಸ್ ಆರಂಭಿಸಲು ತೀರ್ಮಾನಿಸಿದ್ದು, ಇದಕ್ಕೆ ವಿಶ್ವವಿದ್ಯಾಲಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

    8 ಕಾಲೇಜುಗಳ 180 ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಏಕವ್ಯಕ್ತಿ ಶಾಸ್ತ್ರೀಯ ಗಾಯನ, ಲಘು ಮತ್ತು ಗುಂಪು ಹಾಡುಗಾರಿಕೆ, ಜಾನಪದ ವಾದ್ಯ, ಬುಡಕಟ್ಟು ಮತ್ತು ಶಾಸ್ತ್ರೀಯ ನೃತ್ಯ, ಸಾಹಿತ್ಯಿಕ, ಭಾಷಣ, ಚರ್ಚಾ, ಲಲಿತಾ ಕಲೆ, ವ್ಯಂಗ್ಯ ಚಿತ್ರ, ರಂಗೋಲಿ, ಮಿಮಿಕ್ರಿ ಸ್ಪರ್ಧೆ ಸೇರಿ ರಂಗಭೂಮಿ ಕಿರು ನಾಟಕ ಪ್ರದರ್ಶನಗೊಂಡಿತು.
    ಸಹಾಯಕ ಪ್ರಾಧ್ಯಾಪಕ ಡಾ.ಎನ್.ಡಿ.ಗೌಡ, ಸರಸ್ವತಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಫಾತ್ಯರಾಜನ್, ಕಾರ್ಯದರ್ಶಿ ಡಿ.ಕೆ.ಶೀಲಾ, ಪ್ರಾಚಾರ್ಯ ಪ್ರೊ.ಎಂ.ಎಸ್.ಸುಧಾದೇವಿ, ಆಡಳಿತಾಧಿಕಾರಿ ಪ್ರೊ.ಡಿ.ಎಚ್.ನಟರಾಜ, ಪಿ.ಸಿ.ಮುರುಗೇಶಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts