

ಮುಂಬೈ: ಬಾಲಿವುಡ್ನ ಸ್ಟಾರ್ ನಟ ಶಾರೂಖ್ ಖಾನ್ ಅಭಿನಯದ ಬಹುನಿರೀಕ್ಷಿತ 'ಜವಾನ್' ಚಿತ್ರ ಇಂದು ದೇಶಾದ್ಯಂತ ಬಹುತೇಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಸಿನಿಪ್ರೇಕ್ಷಕರಿಂದ ಭರ್ಜರಿ ಪ್ರತಿಕ್ರಿಯೆ ಪಡೆದುಕೊಂಡಿದೆ.
ರಿಲೀಸ್ ಆದ ಮೊದಲ ದಿನವೇ ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ 'ಜವಾನ್', ಶಾರೂಖ್ ಅಭಿಮಾನಿಗಳಿಗೆ ಮನರಂಜನೆ ನೀಡುವಲ್ಲಿ ಯಶಸ್ವಿಯಾಗಿದೆ ಎಂದು ಇತ್ತೀಚಿನ ವರದಿಯೊಂದು ಮಾಹಿತಿ ನೀಡಿದೆ. ಚಿತ್ರದಲ್ಲಿ ಕಿಂಗ್ ಖಾನ್ಗೆ ಜೋಡಿಯಾಗಿ ಮಿಂಚಿದ ನಟಿ ನಯನತಾರ ಮತ್ತು ಪ್ರಮುಖ ಪಾತ್ರದಲ್ಲಿ ನಟಿಸಿದ ವಿಜಯ್ ಸೇತುಪತಿ ಪ್ರೇಕ್ಷಕರ ಗಮನ ಸೆಳೆದಿದ್ದು, ಇದೀಗ ಇವರಿಬ್ಬರ ಸಂಭಾವನೆ ಬಗ್ಗೆ ಸಾಕಷ್ಟು ಕುತೂಹಲ ಕೆರಳಿದೆ.
'ಜವಾನ್' ಚಿತ್ರದಲ್ಲಿ ನಟಿಸಲು ನಯನತಾರ ಮತ್ತು ವಿಜಯ್ ಸೇತುಪತಿ ಬೃಹತ್ ಮೊತ್ತವನ್ನು ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಆದ್ರೆ, ವರದಿಗಳ ಪ್ರಕಾರ ನಯನತಾರ 10 ಕೋಟಿ ರೂ. ಮತ್ತು ವಿಜಯ್ 21 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ.
'ಜವಾನ್' ಚಿತ್ರದ ಹೀರೋ ಶಾರುಖ್ ಖಾನ್ ಅವರು ಬರೋಬ್ಬರಿ 100 ಕೋಟಿ ರೂ. ಹಣವನ್ನು ಸಂಭಾವನೆಯಾಗಿ ಪಡೆದಿದ್ದಾರೆ. ಸದ್ಯ ಚಿತ್ರ ಬಿಡುಗಡೆಗೊಂಡ ಮೊದಲ ದಿನವೇ ಬಾಕ್ಸ್ ಆಫೀಸ್ನಲ್ಲಿ ಭಾರೀ ಸದ್ದು ಮಾಡಿದ್ದು, ಮುಂದಿನ ದಿನಗಳಲ್ಲಿ ಹೇಗೆ ಕಮಾಲ್ ಮಾಡಲಿದೆ ಎಂಬುದನ್ನು ಕಾದುನೋಡಬೇಕಿದೆ,(ಏಜೆನ್ಸೀಸ್).