ನೀವು ತಪ್ಪದೇ ಈ ಆಹಾರಗಳನ್ನು ತಿನ್ನಲೇಬೇಕು… ಇವು ಕೆಟ್ಟ ಕೊಲೆಸ್ಟ್ರಾಲ್‌ನ ಶತ್ರುಗಳು! Cholesterol

Cholesterol

Cholesterol : ಆರೋಗ್ಯವೇ ಭಾಗ್ಯ ಎಂಬುದು ಎಲ್ಲರಿಗೂ ಗೊತ್ತಿದೆ. ಆರೋಗ್ಯವಾಗಿರಬೇಕೆಂದರೆ, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಅದರಲ್ಲೂ ಪ್ರಮುಖವಾಗಿ ನಾವು ತಿನ್ನುವ ಆಹಾರ ಪೋಷಕಾಂಶಗಳ ಆಗರವಾಗಿರಬೇಕು. ಜಂಕ್​ಫುಡ್​ಗಳನ್ನು ತಿಂದು ಆರೋಗ್ಯ ಕೆಡಿಸಿಕೊಳ್ಳಬಾರದು.

blank

ಯಾವುದೇ ಆಹಾರ ಸೇವನೆ ಮಾಡಿದರೂ ಮಿತವಾಗಿ ಸೇವಿಸಬೇಕು. ಆದರೆ, ಅನೇಕ ಜನರು ಅಗತ್ಯಕ್ಕಿಂತ ಹೆಚ್ಚು ಕೊಬ್ಬಿನ ಆಹಾರವನ್ನು ಸೇವಿಸುತ್ತಾರೆ. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ. ಸಾಮಾನ್ಯವಾಗಿ ನಮ್ಮ ದೇಹದಲ್ಲಿ ಒಳ್ಳೆಯದು ಮತ್ತು ಕೆಟ್ಟದು ಎಂಬ ಎರಡು ರೀತಿಯ ಕೊಲೆಸ್ಟ್ರಾಲ್​ಗಳಿರುತ್ತವೆ. ಕೆಟ್ಟ ಕೊಲೆಸ್ಟ್ರಾಲ್​ ಪ್ರಮಾಣ ಹೆಚ್ಚಾದರೆ ಹಲವು ಸಮಸ್ಯೆಗಳು ಉಂಟಾಗಬಹುದು. ಅದರಲ್ಲೂ ಹೃದಯ ಸಂಬಂಧಿತ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಆದರೆ, ನೈಸರ್ಗಿಕ ಮತ್ತು ಆರೋಗ್ಯಕರ ಆಹಾರವನ್ನು ಸೇವಿಸುವುದರಿಂದ ಒಳ್ಳೆಯ ಕೊಲೆಸ್ಟ್ರಾಲ್‌ ಹೆಚ್ಚಿಸಬಹುದು. ಅದೇ ಸಮಯದಲ್ಲಿ ಅಪಧಮನಿಗಳಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನೀರಿನಂತೆ ಹೊರಹಾಕಬಹುದು. ಅಂದಹಾಗೆ, ಒಳ್ಳೆಯ ಕೊಲೆಸ್ಟ್ರಾಲ್ ಮಟ್ಟ ಸಾಮಾನ್ಯವಾಗಿ 40 mg/dl ಗಿಂತ ಹೆಚ್ಚಿರಬೇಕು. ಪುರುಷರಲ್ಲಿ 40 mg/dl ಗಿಂತ ಹೆಚ್ಚು ಮತ್ತು ಮಹಿಳೆಯರಲ್ಲಿ 50 mg/dl ಗಿಂತ ಹೆಚ್ಚು ಇದ್ದರೆ ಉತ್ತಮ.

ಯಾವ ಆಹಾರವನ್ನು ತೆಗೆದುಕೊಳ್ಳಬಹುದು?

ನೀವು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಬಯಸಿದರೆ, ನೀವು ಖಂಡಿತವಾಗಿಯೂ ನಿಮ್ಮ ಆಹಾರದಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳಲೇಬೇಕು. ಹಾಗಾದರೆ, ನಿಮ್ಮ ಆಹಾರದಲ್ಲಿ ಏನೆಲ್ಲ ಸೇರಿಸಿಕೊಳ್ಳಬೇಕು ಅನ್ನೋದನ್ನ ನಾವೀಗ ತಿಳಿದುಕೊಳ್ಳೋಣ.

* ದಾಲ್ಚಿನ್ನಿ ಉರಿಯೂತ ನಿವಾರಕ ಮತ್ತು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿರುವುದರಿಂದ ಉತ್ತಮ ಕೊಲೆಸ್ಟ್ರಾಲ್ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದನ್ನು ಚಹಾಕ್ಕೆ ಸೇರಿಸಬಹುದು ಅಥವಾ ಆಹಾರದಲ್ಲಿ ಮಸಾಲೆಯಾಗಿ ಬಳಸಬಹುದು.

* ಅದೇ ರೀತಿ, ಬೆಳ್ಳುಳ್ಳಿಯು ಉರಿಯೂತ ನಿವಾರಕ ಮತ್ತು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದ್ದು, ಇದು ಕೂಡ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ. ಬೆಳ್ಳುಳ್ಳಿಯ ನಿಯಮಿತ ಸೇವನೆಯೂ ಹೃದ್ರೋಗ ಮತ್ತು ರಕ್ತದೊತ್ತಡದ ಅಪಾಯವನ್ನು ನಿಯಂತ್ರಿಸುತ್ತದೆ ಮತ್ತು ರಕ್ತನಾಳಗಳನ್ನು ಆರೋಗ್ಯಕರವಾಗಿಡುತ್ತದೆ.

ಇದನ್ನೂ ಓದಿ: ಈ 3 ರಾಶಿಯವರು ಡೋಂಟ್​ ಕೇರ್​ ಸ್ವಭಾವ ಹೊಂದಿದ್ದು, ಯಾರ ಭಾವನೆಗೂ ಬೆಲೆ ಕೊಡುವುದಿಲ್ಲವಂತೆ! Zodiac Signs

* ಮೀನು, ವಾಲ್​ನಟ್ಸ್​ ಮತ್ತು ಅಗಸೆ ಬೀಜಗಳಲ್ಲಿ ಕಂಡುಬರುವ ಒಮೆಗಾ -3 ಕೊಬ್ಬಿನಾಮ್ಲಗಳು ಹೃದಯದ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಇವು ಕೆಟ್ಟ ಕೊಲೆಸ್ಟ್ರಾಲ್​ ಅನ್ನು ದೇಹದಿಂದ ತೆಗೆದುಹಾಕಿ, ಒಳ್ಳೆಯ ಕೊಲೆಸ್ಟ್ರಾಲ್​ ಅನ್ನು ಹೆಚ್ಚಿಸುತ್ತದೆ.

* ಆವಕಾಡೊದಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಹೆಚ್ಚಿಸುವ ಏಕಪರ್ಯಾಪ್ತ ಕೊಬ್ಬಿನಾಮ್ಲಗಳಿವೆ. ಆದ್ದರಿಂದ, ಹೆಚ್ಚಿನ ಮಟ್ಟದ ಕೆಟ್ಟ ಕೊಲೆಸ್ಟ್ರಾಲ್ ಇರುವವರು ಇದನ್ನು ಸಾಂದರ್ಭಿಕವಾಗಿ ಸೇವಿಸಬಹುದು.

* ಆಲಿವ್ ಎಣ್ಣೆಯು ಮೊನೊಸಾಚುರೇಟೆಡ್ ಕೊಬ್ಬಿನಾಮ್ಲಗಳನ್ನು ಹೊಂದಿದ್ದು, ಒಳ್ಳೆಯ ಕೊಲೆಸ್ಟ್ರಾಲ್​ ಮಟ್ಟವನ್ನು ಹೆಚ್ಚಿಸುವ ಮೂಲಕ ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.

* ಹಸಿರು ಚಹಾ ಅಥವಾ ಗ್ರೀನ್​ ಟೀ ಉತ್ಕರ್ಷಣ ನಿರೋಧಕಗಳನ್ನು ಹೊಂದಿದ್ದು, ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಅಲ್ಲದೆ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಹೃದಯದ ಆರೋಗ್ಯಕ್ಕೂ ಪ್ರಯೋಜನಕಾರಿಯಾಗಿದೆ.

* ಸಾಲ್ಮನ್, ಮ್ಯಾಕೆರೆಲ್ ಮತ್ತು ಸಾರ್ಡೀನ್‌ಗಳಂತಹ ಮೀನುಗಳು ಒಮೆಗಾ-3 ಕೊಬ್ಬಿನಾಮ್ಲಗಳ ಉತ್ತಮ ಮೂಲಗಳಾಗಿವೆ. ಇವು HDL ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ಇವು ಹೃದಯದ ಆರೋಗ್ಯಕ್ಕೂ ಪ್ರಯೋಜನಕಾರಿಯಾಗಿದೆ.

ಗಮನಿಸಿ: ಈ ಲೇಖನವು ಕೇವಲ ಮಾಹಿತಿಗಾಗಿ ಮಾತ್ರ. ನಿಮ್ಮ ವೈಯಕ್ತಿಕ ಆರೋಗ್ಯ ವೃತ್ತಿಪರರ ಸಲಹೆ ಮತ್ತು ಸೂಚನೆಗಳನ್ನು ಅನುಸರಿಸುವುದು ಉತ್ತಮ. (ಏಜೆನ್ಸೀಸ್​)

ಬೀದಿ ಬದಿ ಅಂಗಡಿಗಳಿಂದ ಜ್ಯೂಸ್​ ಖರೀದಿಸಿ ಕುಡಿಯುವಾಗ ಎಚ್ಚರ… ಈ ಜ್ಯೂಸ್ ಅತ್ಯಂತ ಅಪಾಯಕಾರಿ! Soft Drinks

ಲವ್​ ಬ್ರೇಕಪ್​​ನಿಂದ ಇಷ್ಟೆಲ್ಲ ಪ್ರಯೋಜನಗಳಿವೆಯಾ? ಇಲ್ಲಿದೆ ನೋಡಿ ನೀವು ಅಚ್ಚರಿಪಡುವ ಸಂಗತಿ! Breakup

Share This Article
blank

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

ದಿನವಿಡೀ ಮೊಬೈಲ್​ ನೋಡ್ತಾನೇ ಇರ್ತೀರಾ? ಈ ಚಟದಿಂದ ಹೊರ ಬರಲು ಇದೇ ಸರಳ ಮಾರ್ಗ…mobile

mobile: ಇಂದಿನ ಡಿಜಿಟಲ್ ಜಗತ್ತಿನಲ್ಲಿ, ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಟಿವಿಗಳು ನಮ್ಮ ದೈನಂದಿನ ಜೀವನದ ಅವಿಭಾಜ್ಯ…

blank