

ಮೆಲ್ಬೋರ್ನ್: ಪ್ರಸ್ತುತ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ (Border-Gavaskar Test Series) ಭಾರತ ತಂಡ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ಹಿಂದೆ ಬಿದ್ದಿದ್ದು, ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (World Test Championship) ಫಿನಾಲೆ ದೃಷ್ಟಿಯಿಂದ ಮುಂಬರುವ ಎರಡು ಪಂದ್ಯಗಳಲ್ಲಿ ಗೆಲ್ಲಲೇಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೂ ಸರಣಿಯ ವಿಚಾರಕ್ಕೆ ಬರುವುದಾದರೆ ವಿರಾಟ್ ಕೊಹ್ಲಿ ಮೇಲೆ ಕ್ರೀಡಾ ಪಂಡಿತರು ಹೆಚ್ಚಿನ ನಿರೀಕ್ಷೆಯನ್ನು ಇಟ್ಟುಕೊಂಡಿದ್ದರು. ಅದರಂತೆ ಮೊದಲ ಪಂದ್ಯದಲ್ಲಿ ಮಿಂಚಿದ ವಿರಾಟ್ ಉಳಿದೆರಡು ಮ್ಯಾಚ್ಗಳಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನವನ್ನು ನೀಡಿಲ್ಲ. ಈ ನಿಟ್ಟಿನಲ್ಲಿ ವಿರಾಟ್ರನ್ನು (Virat Kohli) ತಂಡದಿಂದ ಕೈ ಬಿಟ್ಟು ಬೇರೆ ಆಟಗಾರರಿಗೆ ಅವಕಾಶ ನೀಡುವಂತೆ ಸಲಹೆಗಳು ಕೇಳಿ ಬರುತ್ತಿದ್ದು, ಈ ಬಗ್ಗೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮ (Rohit Sharma) ಮಾತನಾಡಿದ್ದಾರೆ.
ಮೆಲ್ಬೋರ್ನ್ನಲ್ಲಿ ಡಿಸೆಂಬರ್ 26ರಿಂದ ನಡೆಯಲಿರುವ ಬಾಕ್ಸಿಂಗ್ ಡೇ ಟೆಸ್ಟ್ಗೂ ಮುನ್ನ ಸುದ್ದಿಗೋಷ್ಠಿ ಉದ್ಧೇಶಿಸಿ ಮಾತನಾಡಿದ ರೋಹಿತ್ ಶರ್ಮ (Rohit Sharma), ವಿರಾಟ್ ಕೊಹ್ಲಿಯನ್ನು ಆಧುನಿಕ ಕ್ರಿಕೆಟ್ ಲೋಕದ ಶ್ರೇಷ್ಠ ಆಟಗಾರ ಎಂದು ನೀವೆಲ್ಲಾ ಹೇಳಿದ್ದೀರಿ. ಆಧುನಿಕ ಶ್ರೇಷ್ಠರು ತಮ್ಮದೇ ಆದ ಮಾರ್ಗವನ್ನು ಕಂಡುಕೊಳುತ್ತಾರೆ. ಇದರ ಬಗ್ಗೆ ಹೆಚ್ಚು ಚಿಂತಿಸುವ ಅಗತ್ಯವಿಲ್ಲ.
ಇನ್ನೂ ಬ್ಯಾಟಿಂಗ್ ವಿಚಾರಕ್ಕೆ ಬರುವುದಾದರೆ ಯಾರು ಯಾವ ಕ್ರಮಾಂಕದಲ್ಲಿ ಕಣಕ್ಕಿಳಿಯಬೇಕೆಂಬುದನ್ನು ನಾವು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಪ್ರತಿಬಾರಿಯೂ ಸುದ್ದಿಗೋಷ್ಠಿ ನಡೆದಾಗಲೂ ಇದರ ಬಗ್ಗೆ ಮಾತನಾಡುವ ಅವಶ್ಯಕತೆಯಿಲ್ಲ. ನೀವು ಎಲ್ಲರನ್ನೂ ಮುಕ್ತವಾಗಿ ಆಡಲು ಪ್ರೋತ್ಸಾಹಿಸುತ್ತೀರಿ ಎಂದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮ (Rohit Sharma) ಬಾಕ್ಸಿಂಗ್ ಡೇ ಟೆಸ್ಟ್ಗೂ ಮುನ್ನ ಹೇಳಿದ್ದಾರೆ.
ಭಾರತ (Team India) ಹಾಗೂ ಆಸ್ಟ್ರೇಲಿಯಾ (Australia) ನಡುವಿನ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ (Border-Gavaskar) ಟೆಸ್ಟ್ ಸರಣಿಯೂ ನವೆಂಬರ್ 22ಕ್ಕೆ ಆರಂಭವಾಗಿದ್ದು, ಜನವರಿ 7 ರವರೆಗೆ ಆಯೋಜನೆಗೊಂಡಿದೆ. ಈ ಸರಣಿ ಆಡಲು ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ಆಸ್ಟ್ರೇಲಿಯಾಕ್ಕೆ ಪ್ರವಾಸ ಮಾಡಲಿದೆ. ಬಾರ್ಡರ್- ಗವಾಸ್ಕರ್ ಟ್ರೋಫಿ ಸರಣಿಯು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2023-2025 ಅಡಿಯಲ್ಲಿ ಆಡಲಾಗುತ್ತಿದೆ.