Sanju Samson : ಫೆಬ್ರವರಿ 19ರಿಂದ ಪಾಕಿಸ್ತಾನದಲ್ಲಿ ಆರಂಭವಾಗಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪ್ರಕಟವಾಗಿರುವುದು ನಿಮಗೆಲ್ಲರಿಗೂ ಗೊತ್ತೇ ಇದೆ. ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಸಂಜು ಸ್ಯಾಮ್ಸನ್ಗೆ ಸ್ಥಾನ ಸಿಗಲಿದೆ ಎಂಬ ಭರವಸೆ ಇತ್ತು. ಆದರೆ, ಅದು ಹುಸಿಯಾಗಿದೆ. ಉತ್ತಮ ಪ್ರದರ್ಶನ ನೀಡಿದರೂ ಆಯ್ಕೆ ಮಾಡದಿದ್ದಕ್ಕೆ ಸಂಜು ಭಾರಿ ನಿರಾಶೆ ಅನುಭವಿಸಿದ್ದಾರೆ. ಇದರ ನಡುವೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಸಂಜುಗೆ ಸ್ಥಾನ ಸಿಗದಿದ್ದನ್ನು ಖಂಡಿಸಿದ್ದಾರೆ.
ಪ್ರತಿ 4 ವರ್ಷಗಳಿಗೊಮ್ಮೆ ನಡೆಯುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಈ ವರ್ಷ ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ಪಾಕಿಸ್ತಾನ ಮತ್ತು ದುಬೈನಲ್ಲಿ ನಡೆಯಲಿದೆ. ಚಾಂಪಿಯನ್ಸ್ ಟ್ರೋಫಿಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದ್ದು, ರೋಹಿತ್ ಶರ್ಮ ನಾಯಕನಾಗಿದ್ದು, ಶುಭಮಾನ್ ಗಿಲ್ ಉಪನಾಯಕನಾಗಿದ್ದಾರೆ.
ತಂಡದಲ್ಲಿ ಸಂಜು ಸ್ಯಾಮ್ಸನ್ ಸ್ಥಾನ ಪಡೆಯುತ್ತಾರೆ ಎಂದು ಅಭಿಮಾನಿಗಳು ನಿರೀಕ್ಷಿಸುತ್ತಿದ್ದರು. ಆದರೆ, ಸಂಜುಗೆ ಸ್ಥಾನ ನೀಡದಿರುವುದು ಅಭಿಮಾನಿಗಳನ್ನು ನಿರಾಶೆಗೊಳಿಸಿದೆ. ಸಂಜು ಸ್ಯಾಮ್ಸನ್ ಅವರು ಕಳೆದ 5 ಟಿ20 ಪಂದ್ಯಗಳಲ್ಲಿ 3 ಶತಕಗಳನ್ನು ಗಳಿಸಿದ್ದಾರೆ. ಹೀಗಿರುವಾಗ ಸ್ಥಾನ ನೀಡದಿರುವುದು ಭಾರಿ ಟೀಕೆಗೆ ಗುರಿಯಾಗಿದೆ. ಕೇರಳದ ಕಾಂಗ್ರೆಸ್ ಸಂಸದ ಶಶಿ ತರೂರ್ ಸಹ ಟೀಕೆ ಮಾಡಿದ್ದಾರೆ.
ಇದು ಸಂಜು ಸ್ಯಾಮ್ಸನ್ ಮತ್ತು ಕೇರಳ ಕ್ರಿಕೆಟ್ ಅಸೋಸಿಯೇಷನ್ ನಡುವಿನ ದುಃಖದ ಕತೆ. ಇದಕ್ಕೂ ಮೊದಲು, ಕಾರಣಾಂತರಗಳಿಂದ ಸೈಯದ್ ಮುಷ್ತಾಕ್ ಅಲಿ ಮತ್ತು ವಿಜಯ್ ಹಜಾರೆ ಸರಣಿಯ ತರಬೇತಿ ಶಿಬಿರದಲ್ಲಿ ಭಾಗವಹಿಸುವುದಿಲ್ಲ ಎಂದು ಸಂಜು ಸ್ಯಾಮ್ಸನ್, ಕೇರಳ ಕ್ರಿಕೆಟ್ ಅಸೋಸಿಯೇಷನ್‌ಗೆ ಪತ್ರ ಬರೆದಿದ್ದರು. ಭಾಗವಹಿಸಲು ಸಾಧ್ಯವಾಗದಿದ್ದಕ್ಕೆ ಬೇಸರ ಹೊರಹಾಕಿದರು. ಆದರೆ, ವಿಜಯ್ ಹಜಾರೆ ಸರಣಿಗಾಗಿ ಸಂಜು ಅವರನ್ನು ಕೇರಳ ತಂಡದಿಂದ ಕೈಬಿಡಲಾಯಿತು. ಇದೀಗ ಭಾರತೀಯ ಕ್ರಿಕೆಟ್ ತಂಡದಿಂದಲೂ ಕೈಬಿಡಲಾಗಿದೆ.
ವಿಜಯ್ ಹಜಾರೆ ಟ್ರೋಫಿಯಲ್ಲಿ ಸಂಜು ಸ್ಯಾಮ್ಸನ್ ಔಟಾಗದೆ 212 ರನ್ ಗಳಿಸಿರುವ ದಾಖಲೆ ಇದೆ. ಭಾರತೀಯ ಕ್ರಿಕೆಟ್ ತಂಡಕ್ಕಾಗಿ ಆಡುವಾಗ 56.66 (ದಕ್ಷಿಣ ಆಫ್ರಿಕಾ ವಿರುದ್ಧದ ಕೊನೆಯ ಪಂದ್ಯದಲ್ಲಿ ಅವರ ಶತಕ ಸೇರಿದಂತೆ) ರನ್ ರೇಟ್ ಹೊಂದಿದ್ದಾರೆ. ಇಂತಹ ಉತ್ತಮ ಪ್ರದರ್ಶನದ ಹೊರತಾಗಿಯೂ ಬಿಸಿಸಿಐ ಆಡಳಿತಗಾರರ ಅಹಂಕಾರದಿಂದ ಸಂಜು ಸ್ಯಾಮ್ಸನ್ ಭವಿಷ್ಯ ಹಾಳಾಗುತ್ತಿದೆ. ಇದೇ ಅಹಂಕಾರವು ಕೇರಳ ತಂಡವನ್ನು ವಿಜಯ್ ಹಜಾರೆಯಲ್ಲಿ ಕ್ವಾರ್ಟರ್ ಫೈನಲ್‌ಗೆ ಅರ್ಹತೆ ಪಡೆಯಲು ಸಹ ಅನುಮತಿಸಲಿಲ್ಲ. ಇದು ಚಿಂತಿಸುವ ಸಂಗತಿಯಲ್ಲವೇ? ಎಂದು ತರೂರ್ ಹೇಳಿದ್ದಾರೆ.
The sorry saga of the Kerala Cricket Association and Sanju Samson — the player wrote to KCA, in advance, regretting his inability to attend a training camp between the SMA and the Vijay Hazare Trophy tournaments, and was promptly dropped from the squad — has now resulted in…
— Shashi Tharoor (@ShashiTharoor) January 18, 2025
ಭಾರತ ತಂಡ ಹೀಗಿದೆ…
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಬ್ ಪಂತ್ ಮತ್ತು ರವೀಂದ್ರ ಜಡೇಜಾ.
ಅಂದಹಾಗೆ ಚಾಂಪಿಯನ್ಸ್ ಟ್ರೋಫಿಯನ್ನು ಪಾಕಿಸ್ತಾನ ಆತಿಥ್ಯ ವಹಿಸಲಿದೆ. ರಾಜಕೀಯ ಸಮಸ್ಯೆಗಳಿಂದಾಗಿ, ಟೀಮ್ ಇಂಡಿಯಾ ತನ್ನ ಎಲ್ಲ ಪಂದ್ಯಗಳನ್ನು ಯುಎಇಯಲ್ಲಿ ಆಡಲಿದೆ. ಇದರೊಂದಿಗೆ ಒಂದು ಸೆಮಿಫೈನಲ್ ಪಂದ್ಯವನ್ನು ಕೂಡ ಯುಎಇಯಲ್ಲಿಯೇ ನಡೆಸಲಾಗುತ್ತದೆ. ಆದರೆ, ಫೈನಲ್ ಪಂದ್ಯಕ್ಕೆ ಇನ್ನೂ ಸ್ಥಳ ಅಂತಿಮಗೊಂಡಿಲ್ಲ. ಭಾರತ ಫೈನಲ್‌ಗೆ ಪ್ರವೇಶಿಸಿದರೆ, ಆ ಪಂದ್ಯವನ್ನು ಯುಎಇಯಲ್ಲಿ ನಡೆಸಲಾಗುತ್ತದೆ. ಭಾರತ ಬಿಟ್ಟು ಬೇರೆ ಯಾವುದೇ ತಂಡಗಳು ಫೈನಲ್ ತಲುಪಿದರೆ, ಪಾಕಿಸ್ತಾನದಲ್ಲೇ ಆ ಪಂದ್ಯ ನಡೆಯಲಿದೆ. (ಏಜೆನ್ಸೀಸ್)
ನಿಮಗೂ ಆಗಾಗ ಕೆಟ್ಟ ಕನಸುಗಳು ಬರುತ್ತವೆಯೇ? ತಪ್ಪಿಸುವುದು ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ… Nightmares