More

    ಬೇಸಿಗೆಯಲ್ಲಿ ತಾಳೆ ಹಣ್ಣು ತಿನ್ನುವುದರಿಂದ ಸಿಗುವ ಆರೋಗ್ಯ ಲಾಭಗಳ ಬಗ್ಗೆ ತಿಳಿದ್ರೆ ನೀವು ಅಚ್ಚರಿಪಡ್ತೀರಾ!

    ನವದೆಹಲಿ: ಸದ್ಯ ದೇಶದೆಲ್ಲಡೆ ರಣ ಬಿಸಿಲು ಸುಡುತ್ತಿದೆ. ಮಳೆಯಿಲ್ಲದೆ, ಬಿಸಿಲಿನ ಶಾಖಕ್ಕೆ ಜನರು ಬಳಲಿ ಬೆಂಡಾಗಿದ್ದಾರೆ. ಹಲವೆಡೆ ಬೆಳಗ್ಗೆ 8 ಗಂಟೆಯಿಂದಲೇ ಪ್ರಖರ ಬಿಸಿಲಿನ ತಾಪವಿದೆ. ಹೀಗಾಗಿ ಜನ ಮನೆಯಿಂದ ಹೊರ ಬರಲು ಸಹ ಹೆದರುತ್ತಿದ್ದಾರೆ. ಇದರ ಜತೆಗೆ ಮುಂದಿನ ದಿನಗಳಲ್ಲಿ ಬಿಸಿಲಿನ ಝಳ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಈಗಾಗಲೇ ಎಚ್ಚರಿಕೆ ನೀಡಿದೆ. ಈ ಬಿಸಿ ವಾತಾವರಣದಲ್ಲಿ ಜನರು ಜಾಗೃತರಾಗಿರಬೇಕು. ವಯಸ್ಸಾದ ಜನರು ಅನಿವಾರ್ಯವಲ್ಲದಿದ್ದರೆ ಅನಗತ್ಯವಾಗಿ ಹೊರಗೆ ಹೋಗಬಾರದು. ಇದಲ್ಲದೇ ಕೆಲಸ ನಿಮಿತ್ತ ಹೊರಗೆ ಹೋಗಬೇಕಾದಾಗ ಕೊಡೆ, ಟೋಪಿ ಹಾಕಿಕೊಂಡು ಹೋಗಬೇಕು ಎಂದು ಸಲಹೆ ನೀಡಲಾಗಿದೆ.

    ಈ ಬೇಸಿಗೆಯಲ್ಲಿ ಹೆಚ್ಚಿನ ನೀರಿನ ಅಂಶವಿರುವ ಹಣ್ಣುಗಳನ್ನು ತಿನ್ನಲು ಮತ್ತು ಸಾಕಷ್ಟು ನೀರನ್ನು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ. ಬೇಸಿಗೆ ಬಿಸಿಯಿಂದ ರಕ್ಷಿಸಿಕೊಳ್ಳಲು ಜನರು ಎಳನೀರು, ಹಣ್ಣುಗಳು ಸೇರಿದಂತೆ ಅನೇಕ ಆಹಾರಗಳ ಮೊರೆ ಹೋಗುತ್ತಿದ್ದಾರೆ. ಇವುಗಳಲ್ಲಿ ತಾಳೆ ಹಣ್ಣುಗಳು ಕೂಡ ಒಂದು. ತಾಳೆ ಹಣ್ಣಿಗೆ ಸದ್ಯ ಭಾರಿ ಡಿಮ್ಯಾಂಡ್​ ಇದೆ. ಇದು ಕೇವಲ ರುಚಿಕರವಾದ ಹಣ್ಣು ಮಾತ್ರವಲ್ಲದೆ ಹಲವಾರು ಆರೋಗ್ಯ ಪ್ರಯೋಜನಗಳನ್ನು ಸಹ ಹೊಂದಿದೆ.

    ತಾಳೆ ಹಣ್ಣಿನಲ್ಲಿ ವಿಟಮಿನ್​ಗಳು, ಖನಿಜಗಳು ಮತ್ತು ಫೈಬರ್​ ಅಂಶ ಸಮೃದ್ಧವಾಗಿವೆ. ವಿಶೇಷವಾಗಿ ವಿಟಮಿನ್ ಸಿ, ಕಬ್ಬಿಣ, ಪೊಟ್ಯಾಶಿಯಂ, ಕ್ಯಾಲ್ಸಿಯಂ, ಮೆಗ್ನಿಶಿಯಂ ಅಂಶಗಳು ಹೆಚ್ಚಿದೆ. ತಾಳೆ ಹಣ್ಣುಗಳಲ್ಲಿರುವ ಫೈಬರ್ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಲು ತುಂಬಾ ಉಪಯುಕ್ತವಾಗಿದೆ. ಇದು ಮಲಬದ್ಧತೆಯನ್ನು ತಡೆಯುತ್ತದೆ. ಇದರಲ್ಲಿರುವ ವಿಟಮಿನ್ ಸಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ತುಂಬಾ ಉಪಯುಕ್ತವಾಗಿದೆ. ಶೀತ ಮತ್ತು ಕೆಮ್ಮಿನಂತಹ ಕಾಯಿಲೆಗಳ ವಿರುದ್ಧ ಹೋರಾಡಲು ಇದು ತುಂಬಾ ಉಪಯುಕ್ತವಾಗಿದೆ. ಅದರಲ್ಲೂ ಇದರಲ್ಲಿರುವ ಪೊಟ್ಯಾಶಿಯಂ ರಕ್ತದೊತ್ತಡವನ್ನು ನಿಯಂತ್ರಿಸಲು ತುಂಬಾ ಉಪಯುಕ್ತವಾಗಿದೆ.

    ಇದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ ಮತ್ತು ಮೂತ್ರಪಿಂಡದ ಆರೋಗ್ಯವನ್ನು ಸುಧಾರಿಸಲು ತುಂಬಾ ಉಪಯುಕ್ತವಾಗಿದೆ. ಕಿಡ್ನಿ ಸ್ಟೋನ್ಸ್​ ರೂಪುಗೊಳ್ಳುವುದನ್ನು ತಡೆಯುತ್ತದೆ. ಇದರಲ್ಲಿರುವ ಆ್ಯಂಟಿಆಕ್ಸಿಡೆಂಟ್‌ಗಳು ತ್ವಚೆಯನ್ನು ಆರೋಗ್ಯವಾಗಿರಿಸುತ್ತದೆ. ಸುಕ್ಕುಗಳು ಮತ್ತು ಕಲೆಗಳನ್ನು ತಡೆಯುತ್ತದೆ ಮತ್ತು ಕೂದಲು ಉದುರುವಿಕೆಯನ್ನು ಕಡಿಮೆ ಮಾಡುತ್ತದೆ.

    ಇನ್ನೂ ತಾಳೆ ಹಣ್ಣುಗಳು ಕಡಿಮೆ ಕ್ಯಾಲೋರಿ ಮತ್ತು ಹೆಚ್ಚಿನ ಫೈಬರ್ ಅನ್ನು ಹೊಂದಿರುತ್ತವೆ. ಆದ್ದರಿಂದ ಇವು ತೂಕ ನಷ್ಟಕ್ಕೆ ತುಂಬಾ ಉಪಯುಕ್ತವಾಗಿವೆ. ತಾಳೆ ಹಣ್ಣುಗಳಲ್ಲಿ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಇರುವುದರಿಂದ ಇದು ಮಧುಮೇಹಿಗಳಿಗೆ ಉತ್ತಮವಾಗಿದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಬಹಳ ಸಹಾಯಕವಾಗಿದೆ. ಇದರಲ್ಲಿ ನೀರಿನಾಂಶ ಹೆಚ್ಚಿರುವುದರಿಂದ ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡುತ್ತದೆ. ಬೇಸಿಗೆಯಲ್ಲಿ ನಿಯಮಿತವಾಗಿ ತಿನ್ನುವುದರಿಂದ ಕಣ್ಣಿನ ಆರೋಗ್ಯವೂ ಉತ್ತಮಗೊಳ್ಳುತ್ತದೆ. (ಏಜೆನ್ಸೀಸ್​)

    ಹಾರ್ದಿಕ್​ ಪಾಂಡ್ಯಗೆ ನಾಯಕತ್ವ ಸಿಗಲು ರೋಹಿತ್​ ಶರ್ಮ ಕಾರಣ! ರಾಬಿನ್​ ಉತ್ತಪ್ಪ ಸ್ಪೋಟಕ ಹೇಳಿಕೆ

    ಒಮ್ಮೆ ಪೊದೆಯಲ್ಲಿ ಬಟ್ಟೆ ಬದಲಾಯಿಸುವಾಗ… ಯುದ್ಧಕಾಂಡ ನಟಿಯ ಬದುಕಿಗೆ ತಿರುವು ನೀಡಿತು ಆ ಒಂದು ಘಟನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts