20.8 C
Bangalore
Sunday, December 8, 2019

ಓದಿದ್ದು ಡಬಲ್ ಡಿಗ್ರಿಯಾದ್ರೂ ನೇಗಿಲು ಹಿಡಿದ ಯುವಕ

Latest News

ಪತಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದ ಪತ್ನಿಯ ಸೆರೆ

ಕೆಜಿಎಫ್: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯನ್ನೇ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಗೈದ ಪತ್ನಿ ಮತ್ತು ಪ್ರಿಯಕರನನ್ನು ಉರಿಗಾಂ...

ಅರಣ್ಯ ಸರ್ವೆಗೆ ಡ್ರೋನ್: ರಾಜ್ಯದಲ್ಲೇ ಮೊದಲ ಬಾರಿಗೆ ಹೊಸನಗರದಲ್ಲಿ ಪ್ರಾಯೋಗಿಕವಾಗಿ ಜಾರಿ

ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಪ್ರದೇಶ ಗುರುತಿಸಲು ಪ್ರಾಯೋಗಿಕವಾಗಿ ಹೊಸನಗರ ತಾಲೂಕಿನಲ್ಲಿ ಅರಣ್ಯ ಇಲಾಖೆ ಡ್ರೋನ್ (ಏರಿಯಲ್) ಸರ್ವೆ ನಡೆಸಿದ್ದು, ಯಶಸ್ವಿಯಾದರೆ ಇಲಾಖೆಯ...

ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ಸಾಮಾಜಿಕ ಸಾಮರಸ್ಯ,ರಾಷ್ಟ್ರೀಯ ಏಕತೆಗೆ ತಿಂಗಳಿಗೂ ಹೆಚ್ಚು ಕಾಲ ಜಿಲ್ಲಾದ್ಯಂತ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆಗೆ ಶನಿವಾರ ಚಿತ್ರದುರ್ಗದ ಹಳೇ...

ಭಗವದ್ಗೀತೆ ಪಠಣದಿಂದ ಅಜ್ಞಾನ ದೂರ

ಚಿಕ್ಕಬಳ್ಳಾಪುರ: ಚಿಕ್ಕ ವಯಸ್ಸಿನಿಂದಲೇ ಮಕ್ಕಳನ್ನು ಒಳ್ಳೆಯ ವಾತಾವರಣದಲ್ಲಿ ಬೆಳೆಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಹಾತ್ಮಗಾಂಧಿ ಸೇವಾಟ್ರಸ್ಟ್ ಸಂಸ್ಥಾಪಕ ಶ್ರೀ ವಿನಯ್ ಗುರೂಜಿ ಅಭಿಪ್ರಾಯಪಟ್ಟರು. ತಾಲೂಕಿನ...

ನಾಯಿಂದ್ರಹಳ್ಳಿ ವಿವಾದಿತ ರಸ್ತೆ ಸರ್ವೇ

ಚಿಂತಾಮಣಿ: ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಿಂದ್ರಹಳ್ಳಿ ರಸ್ತೆ ವಿವಾದ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳು ಸರ್ವೇ ನಂ.2 ವ್ಯಾಪ್ತಿಯ 5.04...

ವಿಶ್ವನಾಥ ಡಿ. ಹರಪನಹಳ್ಳಿ: ಓದಿದ್ದು ಡಬಲ್ ಡಿಗ್ರಿಯಾದರೂ ನೌಕರಿ ಬೆನ್ನು ಬೀಳದೇ ಯುವಕನೊಬ್ಬ ಮನೆಯವರ ಸಲಹೆ, ಸಹಕಾರದಿಂದ ಚೆಂಡು ಹೂ ಬೆಳೆದು ಇತರೆ ರೈತರು ಹುಬ್ಬೇರಿಸುವಂತೆ ಮಾಡಿದ್ದಾರೆ.

ಹರಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದ ಯುವಕ ಎಚ್.ಮಂಜಪ್ಪ ಕೃಷಿಯಲ್ಲಿ ಲಾಭ ಕಂಡವರು. ಹಾಲಪ್ಪ- ರೇವಕ್ಕ ದಂಪತಿಯ ಐದನೇ ಪುತ್ರ ಮಂಜಪ್ಪ ಬಿಎ, ಬಿಪಿಇಡಿ ಪದವಿ ಪೂರೈಸಿ, ಚಿಕ್ಕಮೇಗಳಗೆರೆ ಗ್ರಾಮದ ಖಾಸಗಿ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕನಾಗಿ ಒಂದೂವರೆ ವರ್ಷ ಕೆಲಸ ಮಾಡಿದ್ದಾರೆ.

ವ್ಯಾಸಂಗದ ಸಮಯದಲ್ಲಿ ಕೃಷಿಕರ ಸಾಧನೆ, ಸಮಗ್ರ, ಆಧುನಿಕ ವ್ಯವಸಾಯದ ಬಗ್ಗೆ ಆಸಕ್ತಿವಹಿಸಿ ಪುಸ್ತಕಗಳನ್ನು ಓದುತ್ತಿದ್ದ ಮಂಜಪ್ಪ ಅವರಿಗೆ ನಾಲ್ಕು ಗೋಡೆಗಳ ಮಧ್ಯೆ ಕಾಲ ಕಳೆಯುವುದಕ್ಕಿಂತ ಬೇಸಾಯದಲ್ಲಿ ಆಸಕ್ತಿ ಹೆಚ್ಚಾಯಿತು. ಏನಾದರೂ ಸಾಧನೆ ಮಾಡುವ ಛಲ ಅವರನ್ನು ಕೃಷಿಯತ್ತ ಆಕರ್ಷಿಸುವಂತೆ ಮಾಡಿತು.

2000ರಲ್ಲಿ ವಿವಿಧ ಖಾಸಗಿ ಕಂಪನಿಗಳು ಚೆಂಡು ಹೂ ಬೆಳೆಯಲು ರೈತರ ದುಂಬಾಲು ಬಿದ್ದಿದ್ದರು. ಅದೇ ಸಂದರ್ಭದಲ್ಲಿ ಯುವ ಕೃಷಿಕ ಮಂಜಪ್ಪ ಪ್ರಾಯೋಗಿಕ ಪ್ರಯತ್ನಕ್ಕೆ ಹೆಜ್ಜೆಯಿಟ್ಟರು, ತಮ್ಮದೇ ಜಮೀನಿನ ಒಂದು ಎಕರೆಯಲ್ಲಿ ಸಹೋದರರಾದ ರಾಮಪ್ಪ, ದೇವೇಂದ್ರಪ್ಪ ಅವರ ಸಹಾಯದಿಂದ ಚೆಂಡು ಹೂ ಸಸಿ ನಾಟಿ ಮಾಡಿದರು. ಸರಿಸುಮಾರು 9 ಟನ್ ಚೆಂಡು ಹೂ ಬೆಳೆದು ಅಲ್ಪಲಾಭ ಗಳಿಸಿದರು. ಆಧುನಿಕ ಕೃಷಿ ಪದ್ಧತಿ ಮೂಲಕ 3.5 ಎಕರೆ ಚೆಂಡು ಹೂವಿನ ಸಸಿ ನಾಟಿ ಮಾಡಿದ್ದಾರೆ. ಉತ್ತಮ ಇಳುವರಿ ಬಂದಿದೆ. ಇದುವರೆಗೂ ಏಳು ಬಾರಿ ಕಟಾವು ಮಾಡಲಾಗಿದೆ. ಅಂದಾಜು 25 ಟನ್‌ನಷ್ಟು ಚೆಂಡು ಹೂ ಇಳುವರಿ ಬಂದಿದೆ. ಕ್ವಿಂಟಲ್‌ವೊಂದಕ್ಕೆ ಖಾಸಗಿ ಕಂಪನಿಯವರು 5100 ರೂ.ಕೊಡುತ್ತಿದ್ದಾರೆ.

ಬಿತ್ತನೆಯಿಂದ ಕಟಾವಿನ ತನಕ ಎಕರೆವೊಂದಕ್ಕೆ 20 ಸಾವಿರ ಖರ್ಚು ಬರುತ್ತದೆ. ಕೂಲಿ ಆಳು ಜೋಡಿಸಿ ಕೆಲಸ ಮಾಡುವುದು ತುಂಬ ರಿಸ್ಕ್ ಆಗುತ್ತದೆ. ಚೆಂಡು ಹೂವಿನ ಬೆಳೆ ಛಲ ಬಿಡದೇ ಮಾಡುವ ಕಾಯಕ. ಕಷ್ಟಪಟ್ಟು ಕೆಲಸ ಮಾಡಿದರೆ ಎಕರೆಗೆ 50 ರಿಂದ 60 ಸಾವಿರ ಲಾಭ ಪಡೆಯಬಹುದು. ಮನೆಯವರೇ ಖುದ್ದು ಮಾಡಿದರೆ ಹೆಚ್ಚಿನ ಲಾಭಗಳಿಸಲು ಸಾಧ್ಯ ಎನ್ನುತ್ತಾರೆ ಮಂಜಪ್ಪ. ಬೆತ್ತ, ಬಳಪ ಹಿಡಿದು ದೈಹಿಕ ಶಿಕ್ಷಕನಾಗಿ ಮಕ್ಕಳಿಗೆ ಪಾಠ ಹೇಳುತ್ತಿದ್ದ ಶಿಕ್ಷಕರು, ಹತ್ತು ವರ್ಷದಿಂದ ನೇಗಿಲು ಹಿಡಿದಿದ್ದಾರೆ. ಮನೆಯ 16 ಎಕರೆಯ ಜಮೀನಿನಲ್ಲಿ ಕಬ್ಬು, ಈರುಳ್ಳಿ, ಹತ್ತಿ, ಟೊಮ್ಯಾಟೋ, ಮೆಕ್ಕೆಜೋಳದಂತಹ ಬೆಳೆಗಳನ್ನು ಬೆಳೆಯುತ್ತಾ ಕೃಷಿಯಲ್ಲಿಯೇ ಖುಷಿ ಪಡುತ್ತಿದ್ದಾರೆ.

Stay connected

278,744FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...