ಕೃಷಿಕರಿಗೆ ಹೆಣ್ಣು ಕೊಡಲು ಹಿಂದೇಟು; ಕನ್ಯಾಭಾಗ್ಯ ಘೋಷಣೆ ಮಾಡುವಂತೆ ಸಿದ್ದರಾಮಯ್ಯಗೆ ಪತ್ರ ಬರೆದ ಯುವ ರೈತರು

siddaramaiah
cm siddaramaiah request
Published on

ಹಾವೇರಿ: ಹೆಣ್ಣು ಕೊಡಲು ಹಿಂದೇಟು ಹಾಕುತ್ತಿರುವುದಕ್ಕೆ ಬೇಸತ್ತ ಯುವ ರೈತರು, ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ವಿಶೇಷ ಯೋಜನೆ ರೂಪಿಸುವಂತೆ ಮನವಿ ಮಾಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ಬ್ಯಾಡಗಿ ತಾಲೂಕಿನ ಯುವ ರೈತರು ಕನ್ಯಾಭಾಗ್ಯ ಆರಂಭಿಸುವಂತೆ ಪತ್ರದ ಮೂಲಕ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. 5 ರಿಂದ 6 ಎಕರೆ ಜಮೀನು ಇದೆ. ಆದರೂ ಹೆಣ್ಣು ಕೊಡಲು ಹಿಂದೇಟು ಹಾಕುತ್ತಿದ್ದಾರೆ. ರೈತರು ಎಂದು ಎಷ್ಟೋ ಜನ ಕನ್ಯೆಯನ್ನು ತೋರಿಸುತ್ತಿಲ್ಲ. ಅದೇ 5 ಸಾವಿರ ಸಂಬಳ ದುಡಿಯುವ ವ್ಯಕ್ತಿಗೆ ಹೆಣ್ಣು ಕೊಡಲು ಮುಂದಾಗುತ್ತಾರೆ.

ನಾವು ಉತ್ತಮ ಮಳೆ ಬಂದರೆ ಲಕ್ಷಾಂತರ ರೂಪಾಯಿ ಗಳಿಸುತ್ತೇವೆ. ಆದರೆ ಹವಾಮಾನ ವೈಪರೀತ್ಯದಿಂದ ನಷ್ಟ ಅನುಭವಿಸುತ್ತಿದ್ದೇವೆ. ಕೃಷಿ ಮಾಡುತ್ತಿರುವವರೇ ತಮ್ಮ ಮಗಳನ್ನು ಕೃಷಿಕನಿಗೆ ಕೊಡಲು ಹಿಂದೇಟು ಹಾಕುವ ಪರಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಯುವ ರೈತರನ್ನು ಮದುವೆಯಾದ ಯುವತಿಯರಿಗೆ ಕನಿಷ್ಠ 2 ಲಕ್ಷ ರೂ. ಪ್ರೋತ್ಸಾಹ ಧನ ನೀಡಬೇಕು. ರೈತರನ್ನು ಮದುವೆಯಾದ ವಿದ್ಯಾವಂತ ಯುವತಿಯರಿಗೆ ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ನೀಡಬೇಕು. ಮನೆಯೊಡತಿಗೆ 2 ಸಾವಿರ ಕೊಡುವ ರೀತಿ ರೈತರನ್ನು ಮದುವೆಯಾದವರಿಗೂ ಹಣ ಕೊಡಬೇಕು. ಇಂತಹ ಕಾರ್ಯಕ್ರಮಗಳನ್ನೊಳಗೊಂಡ ಕನ್ಯಾಭಾಗ್ಯ ಯೋಜನೆ ಜಾರಿಗೆ ತರಬೇಕೆಂದು ಸಿದ್ದರಾಮಯ್ಯ ಅವರಿಗೆ ಯುವರೈತರು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net