More

  ನಟಿ ಸಾಯಿ ಪಲ್ಲವಿ ನಟನೆ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಟಾಲಿವುಡ್​ ನಟ​!

  ತೆಲಂಗಾಣ: ಬಹುಭಾಷಾ ನಟಿ ಸಾಯಿ ಪಲ್ಲವಿ ತಮ್ಮ ನಟನೆ ಹಾಗೂ ಸಿಂಪಲ್​ ಬ್ಯೂಟಿಯಿಂದಲೇ ಮನೆ ಮಾತಾಗಿರುವ ತಾರೆ. ಮುಗ್ಧ ಮೊಗದ, ಅಷ್ಟೇ ಮುಗ್ಧ ನಗುವಿನ ಚೆಲುವೆ ಸಾಯಿ ಪಲ್ಲವಿಯನ್ನು ಇಷ್ಟಪಡದವರು ಇಲ್ಲವೆಂದೇ ಹೇಳಬಹುದು. ಪಾತ್ರಗಳ ಆಯ್ಕೆಯಲ್ಲಿ ತುಂಬ ಕಾಳಜಿ ವಹಿಸುತ್ತಿದ್ದಾರೆ. ಮಲಯಾಳಂ ಮಾತ್ರವಲ್ಲದೆ ದಕ್ಷಿಣ ಭಾರತದ ಇತರ ಭಾಷೆಗಳಲ್ಲಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ ಸಾಯಿ ಪಲ್ಲವಿ ತಮ್ಮ ವೈಯಕ್ತಿಕ ಜೀವನದಲ್ಲೂ ವಿಭಿನ್ನರಾಗಿದ್ದಾರೆ.

  ಇದನ್ನೂ ಓದಿ: ಲೋಕಸಮರ: ಕಾಂಗ್ರೆಸ್​ನಿಂದ ಅಭ್ಯರ್ಥಿಗಳ 6ನೇ ಪಟ್ಟಿ ಬಿಡುಗಡೆ! 5 ಅಭ್ಯರ್ಥಿಗಳ ಹೆಸರು ಪ್ರಕಟ

  ಟಾಲಿವುಡ್‌ ನಟ ನಿಖಿಲ್‌ ಸಿದ್ದಾರ್ಥ್‌ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಈ ನಡುವೆ ಸಂದರ್ಶವೊಂದರಲ್ಲಿ ಬಹುಭಾಷಾ ನಟಿ ಸಾಯಿಪಲ್ಲವಿ ಅವರ ನಟನೆ ಕುರಿತು ಮಾತನಾಡಿದ್ದಾರೆ.

  ಸಂದರ್ಶನವೊಂದರಲ್ಲಿ ಭಾಗವಹಿಸಿದ್ದ ನಿಖಿಲ್ ಗೆ ಆ್ಯಂಕರ್ ಒಂದು ಪ್ರಶ್ನೆ ಕೇಳಿದ್ದಾರೆ. ನಿಮಗೆ ಯಾವ ನಟಿಯ ನಟನೆ ನೋಡಿ ಕಣ್ಣೀರು ಹಾಕಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ನಿಖಿಲ್​ ಸಾಯಿ ಪಲ್ಲವಿ ಅವರ ನಟನೆ ನನಗೆ ಇಷ್ಟವಾದ ಜೊತೆಗೆ ಕಣ್ಣೀರು ತರಿಸಿತ್ತು ಎಂದಿದ್ದಾರೆ. ವಿರಾಟ ಪರ್ವಂ ಸಿನಿಮಾದಲ್ಲಿ ಸಾಯಿ ಪಲ್ಲವಿ ಅಭಿನಯ ಇಷ್ಟವಾಯಿತು ಎಂದಿರುವ ಅವರು. ಅದರಲ್ಲೂ ಚಿತ್ರದ ಕ್ಲೈಮ್ಯಾಕ್ಸ್ ನಲ್ಲಿ ಸಾಯಿ ಪಲ್ಲವಿ ಸಾವಿನ ದೃಶ್ಯ ಕಣ್ಣಲ್ಲಿ ನೀರು ತರಿಸಿತ್ತು. ನಾನು ಸಾಯಿ ಪಲ್ಲವಿಗೂ ಅದನ್ನೇ ಹೇಳಿದ್ದೆ ಎಂದು ನಿಖಿಲ್ ಹೇಳಿದ್ದಾರೆ.

  ಸದ್ಯ ಸಾಯಿ ಪಲ್ಲವಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಾಗ ಚೈತನ್ಯ ಜೊತೆ ತಾಂಡೇಲ್ ಸಿನಿಮಾದಲ್ಲಿ ಸಾಯಿ ಪಲ್ಲವಿ ನಟಿಸಲಿದ್ದಾರೆ. ಈ ಸಿನಿಮಾದ ಶೂಟಿಂಗ್ ವೇಗವಾಗಿ ಸಾಗುತ್ತಿದೆ.

  ಮ್ಯಾಟ್ರಿಮೋನಿಯಲ್ಲಿ ಪರಿಚಯ: ಮದುವೆಯ ಆಸೆ ತೋರಿಸಿ ಯುವತಿಗೆ 2.7 ಕೋಟಿ ರು. ಪಂಗನಾಮ!

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts