More

    ಟೆಕ್ಕಿಯ ಫ್ಲ್ಯಾಟ್​ನ ಸ್ನಾನದ ಕೋಣೆಯಲ್ಲಿ ಯುವತಿಯ ಶವ; ಅನುಮಾನಾಸ್ಪದ ಸಾವಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲು

    ಬೆಂಗಳೂರು: ಸಾಫ್ಟ್​ವೇರ್​ ಉದ್ಯೋಗಿಯೊಬ್ಬರ ಫ್ಲ್ಯಾಟ್​ನಲ್ಲಿ ಯುವತಿಯೊಬ್ಬಳು ಸಾವಿಗೀಡಾಗಿದ್ದು, ಸ್ನಾನದ ಕೋಣೆಯಲ್ಲಿ ಶವ ಅನುಮಾನಾಸ್ಪದವಾಗಿ ಕಂಡುಬಂದಿದೆ. ಬೆಂಗಳೂರಿನ ಬೆಳ್ಳಂದೂರಿನ ಫ್ಲ್ಯಾಟ್​ವೊಂದರಲ್ಲಿ ಈ ಪ್ರಕರಣ ನಡೆದಿದೆ.

    ಯುವತಿ ಕವಿತಾ (19) ಮೃತಪಟ್ಟವಳು. ಸಾಫ್ಟ್​ವೇರ್ ಕಂಪನಿಯೊಂದರಲ್ಲಿ ಉದ್ಯೋಗಿ ಆಗಿರುವ ವಿವೇಕ್ ಎಂಬವರ ಮನೆಯಲ್ಲಿ ಈ ಯುವತಿ ಮಗುವನ್ನು ನೋಡಿಕೊಳ್ಳುವ ಕೆಲಸ ಮಾಡುತ್ತಿದ್ದಳು.

    ಇದನ್ನೂ ಓದಿ: ಬಾಲಕನ ಮೇಲೆಯೇ ಅತ್ಯಾಚಾರವೆಸಗಿದ ಯುವಕ; ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

    ಇಂದು ಬೆಳಗ್ಗೆ ಫ್ಲ್ಯಾಟ್​ನ ಸ್ನಾನದ ಕೋಣೆಯಲ್ಲಿ ಯುವತಿಯ ಶವ ಕಂಡುಬಂದಿದೆ. ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆಕೆಯ ಪಾಲಕರಿಗೆ ಮಾಹಿತಿ ನೀಡಲಾಗಿದೆ ಎಂದು ವಿವೇಕ್​ ಪೊಲೀಸರಿಗೆ ತಿಳಿಸಿದ್ದಾರೆ.

    ಇದನ್ನೂ ಓದಿ: ಗಂಡ-ಹೆಂಡತಿ ಜಗಳದ ದುರ್ಲಾಭ ಪಡೆಯಲು ಯತ್ನಿಸಿದ ಪೊಲೀಸ್​; ಇನ್​ಸ್ಪೆಕ್ಟರ್​-ಎಎಸ್​ಐ ವಿರುದ್ಧ ದಾಖಲಾಯಿತು ಎಫ್​​ಐಆರ್​

    ಬೆಳ್ಳಂದೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಯುವತಿ ಕವಿತಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೇಂಟ್​ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಯುವತಿಯ ಅನುಮಾನಾಸ್ಪದ ಸಾವಿನ ಹಿನ್ನಲೆಯಲ್ಲಿ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಟೆಕ್ಕಿಯ ಫ್ಲ್ಯಾಟ್​ನ ಸ್ನಾನದ ಕೋಣೆಯಲ್ಲಿ ಯುವತಿಯ ಶವ; ಅನುಮಾನಾಸ್ಪದ ಸಾವಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲು
    ಕವಿತಾ

    ಹೆಂಡತಿಯೊಂದಿಗೆ ಜಗಳವಾಡಿದ ಡಾಕ್ಟರ್​ ಸಾವು; ಬೆಡ್​ರೂಮ್​ನಲ್ಲಿ ಹೊತ್ತಿ ಉರಿದ ಬೆಂಕಿ..!

    ರಜೆಗೆಂದು ಊರಿಗೆ ಬಂದು ಆತ್ಮಹತ್ಯೆ ಮಾಡಿಕೊಂಡ ಯೋಧ: ಮೇಲಧಿಕಾರಿಗಳ ಕಿರುಕುಳದಿಂದ ಬೇಸತ್ತು ನೇಣಿಗೆ ಶರಣು!?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts