ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಕೆ.ಆರ್.ನಗರ: ಪಟ್ಟಣದ ಹೊರವಲಯದ ಚಾಮರಾಜ ಬಲದಂಡೆ ನಾಲೆ ಬಳಿಯ ಮರವೊಂದಕ್ಕೆ ಮಂಗಳವಾರ ರಾತ್ರಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪಟ್ಟಣದ ಆಂಜನೇಯ ಬಡಾವಣೆಯ ಪಾಂಡುರಂಗ ದೇವಸ್ಥಾನ ಹಿಂಭಾಗದ ನಿವಾಸಿ ಕೃಷ್ಣ (ತಿಮ್ಮಣ್ಣ) ಅವರ ಮಗ ಕೆ.ಕೆ.ವೆಂಕಟೇಶ್(25) ಆತ್ಮಹತ್ಯೆ ಮಾಡಿಕೊಂಡ ಯುವಕ.

ಕಾರು ಚಾಲಕನಾಗಿದ್ದ ಈತ ಲಕ್ಷಾಂತರ ರೂ. ಕೈ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಚಾಮರಾಜ ಬಲದಂಡೆ ನಾಲೆ ಬಳಿಯ ಗೂಳಿ ರಾಮೇಗೌಡರ ಅವರ ಜಮೀನಿನ ಹುಣಸೆ ಮರಕ್ಕೆ ನೇಣು ಹಾಕಿಕೊಂಡಿದ್ದಾನೆ. ಬುಧವಾರ ಬೆಳಗ್ಗೆ ಜಮೀನಿಗೆ ತೆರಳಿದ ಸ್ಥಳೀಯರಿಗೆ ನೇಣು ಹಾಕಿಕೊಂಡಿರುವುದು ಪತ್ತೆಯಾಗಿದೆ. ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *