ಪ್ರಾಣವನ್ನೇ ಕಿತ್ತುಕೊಂಡ ರೀಲ್ಸ್​ ಹುಚ್ಚು!

reels

ಹೈದರಾಬಾದ್​: ಇಂದಿನ ಯುವ ಪೀಳಿಗೆಯಲ್ಲಿ ರೀಲ್ಸ್ ಮಾಡುವ ಹುಚ್ಚು ತುಸು ಹೆಚ್ಚಾಗಿಯೇ ಇದೆ. ಎಲ್ಲೆಂದರಲ್ಲಿ ರೀಲ್ಸ್ ಮಾಡುವುದನ್ನು ಕೆಲವರು ಚಟವಾಗಿಸಿಕೊಂಡಿದ್ದಾರೆ. ಇಂಥವರು ಏನಾದರೂ ಒಂದು ಕೀಟಲೆ, ಚೇಷ್ಟೆ, ಮಾಡುತ್ತಲೇ ಇರುತ್ತಾರೆ. ಆದರೆ ಇದೇ ರೀಲ್ಸ್ ಹುಚ್ಚು ಇಲ್ಲೊಬ್ಬನ ಪ್ರಾಣವನ್ನೇ ತೆಗೆದಿದೆ.

ಹೈದರಾಬಾದ್​ನಲ್ಲಿ ನಡೆದಿರುವ ಘಟನೆಯಲ್ಲಿ ಸನತ್ ನಗರದ ನಿವಾಸಿ 16 ವರ್ಷದ ಸರ್ಪರಾಜ್ ಮರಣ ಹೊಂದಿದ್ದಾನೆ. ಸ್ನೇಹಿತರೊಂದಿಗೆ ರೈಲ್ವೆ ಹಳಿಯ ಪಕ್ಕದಲ್ಲಿ ನಿಂತು ರೀಲ್ಸ್ ರೆಕಾರ್ಡ್ ಮಾಡುತ್ತಿದ್ದ. ಈ ಸಂದರ್ಭದಲ್ಲಿ ಹಿಂದಿನಿಂದ ಬಂದ ಟ್ರೈನ್ ಯುವಕನಿಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಶುಲ್ಕ ಪಾವತಿಸದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷೆ; ಶಿಕ್ಷಕಿ ಅಮಾನತು!

ಪರಿಣಾಮವಾಗಿ ಸರ್ಪರಾಜ್ ಸ್ಥಳದಲ್ಲೇ ಮೃತಪಟ್ಟಿದ್ದು, ಬಾಳಿ ಬದುಕಬೇಕಾದ ಯುವಕ ಪ್ರಾಣ ಕಳೆದುಕೊಂಡಿದ್ದಾನೆ. ಈ ಘಟನೆಯನ್ನು ಆತನ ಸ್ನೇಹಿತನ ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿದೆ.ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ.(ಏಜೆನ್ಸೀಸ್​)

Share This Article

ಬೇಸಿಗೆಯಲ್ಲಿ ಕೋಳಿ ಅಥವಾ ಮೀನು?; ತಿನ್ನಲು ಯಾವ ಮಾಂಸ ಉತ್ತಮ? ಇಲ್ಲಿದೆ ಮಾಹಿತಿ.. | Meat

Meat : ಸಾಮಾನ್ಯವಾಗಿ ಬೇಸಿಗೆಯಲ್ಲಿ ಅಧಿಕ ಜನರು ತಂಪುಪಾನಿಯಗಳನ್ನು ಸೇವಿಸುತ್ತಾರೆ. ಈ ಸಮಯದಲ್ಲಿ ಹೆಚ್ಚಿನವರು ಹಗುರವಾದ(ಮೃದುವಾದ)…

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…