More

    ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಯುವಕರು

    ಚಿಕ್ಕಮಗಳೂರು: ಬಿಜೆಪಿಯವರು ತೋರಿಸುವ ಆಸೆ, ಸುಳ್ಳು ಭರವಸೆ ಹಾಗೂ ಆಮಿಷಗಳಿಗೆ ಒಳಗಾಗದೆ ಜನ ಈ ಬಾರಿ ಕಾಂಗ್ರೆಸ್ ಪಕ್ಷವಮನ್ನು ಬೆಂಬಲಿಸಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್ ತಿಳಿಸಿದರು.

    ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಾಗರ ಹೋಬಳಿಯ ಕಳವಾಸೆ, ಹೊಸಕೊಪ್ಪ, ಬೀಕನಹಳ್ಳಿ, ಸಿದ್ದಾಪುರ, ಕೊಂಕಳಮನೆ, ಗಾಳಿಗುಡ್ಡೆ ಗ್ರಾಮದ ೨೫ ಕ್ಕೂ ಹೆಚ್ಚು ಯುವಕರು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಬಿ.ಎಲ್.ಪ್ರವೀಣ್ ಬೆಟ್ಟಗೆರೆ ನೇತೃತ್ವದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ೫ ಗ್ಯಾರಂಟಿ ಯೋಜನೆಗಳು ಜನರ ಮನಸ್ಸಿನಲ್ಲಿ ನೆಲೆಯೂರಿವೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತ ಒಪ್ಪಿ ಇಂದು ಜನವಿರೋಧಿ ಬಿಜೆಪಿ ಪಕ್ಷವನ್ನು ತೊರೆದ ಯುವಕರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಹೇಳಿದರು.
    ಕೇಂದ್ರ ಬಿಜೆಪಿ ಸರ್ಕಾರ ಜನಪರವಾದ ಆಡಳಿತ ನಡೆಸುವಲ್ಲಿ ವಿಫಲವಾಗಿದೆ. ಕಳೆದ ೧೦ ವರ್ಷ ಆಡಳಿತ ನಡೆಸಿರುವ ನರೇಂದ್ರಮೋದಿ ನೇತೃತ್ವದ ಬಿಜೆಪಿ ಜನವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು, ಇದರಿಂದ ಬೇಸತ್ತಿರುವ ಯುವಜನತೆ ಕಾಂಗ್ರೆಸ್ ಪಕ್ಷದ ಕಡೆ ಮುಖ ಮಾಡಿದ್ದಾರೆ. ಈ ಬಾರಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಗೆಲುವು ಶತಸಿದ್ದ ಎಂದು ತಿಳಿಸಿದರು.
    ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ ಉಸ್ತುವಾರಿ ಎಂ.ಎಲ್.ಮೂರ್ತಿ ಮಾತನಾಡಿ, ಮತದಾರರು ಜಾಗೃತರಾಗಿ ಬಿಜೆಪಿಯನ್ನು ತಿರಸ್ಕರಿಸುವ ಮೂಲಕ ಈ ಬಾರಿ ಬೆಜೆಪಿಯನ್ನು ಮನೆಗೆ ಕಳುಹಿಸುವ ಕೆಲಸವನ್ನು ಮಾಡಬೇಕು ಎಂದು ಕರೆ ನೀಡಿದರು.
    ಕಾಂಗ್ರೆಸ್ ಪಕ್ಷದ ರಾಷ್ಟಿçÃಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನಪರವಾದ ಕಾರ್ಯಕ್ರಮಗಳನ್ನು ನೀಡುತ್ತಿದೆ. ರಾಹುಲ್‌ಗಾಂಧಿ ಅವರ ವಿಶಾಲ ಹೃದಯವನ್ನು ಎಲ್ಲ ವರ್ಗದ ಜನರು ಒಪ್ಪಿದ್ದಾರೆ. ಕಾಂಗ್ರೆಸ್ ಕೈ ಬಲಪಡಿಸಲು ಎಲ್ಲರೂ ಒಗ್ಗಟ್ಟಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅವರ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದರು.
    ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಕೆ.ಮಹಮದ್ ಮಾತನಾಡಿ, ಇಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾದ ಉತ್ತಮವಾದ ವಾತಾವರಣ ಇದೆ. ಎಲ್ಲರೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಗೆಲುವಿಗೆ ಶ್ರಮಿಸೋಣ. ರಾಜ್ಯ ಕಾಂಗ್ರೆಸ್ ಸರ್ಕಾರದ ೫ ಗ್ಯಾರಂಟಿ ಯೋಜನೆಗಳನ್ನು ಮನೆ ಮನಗೆ ತಲುಪಿಸುವ ಕೆಲಸವನ್ನು ಮಾಡೋಣ ಎಂದರು.
    ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಬಿ.ಎಲ್.ಪ್ರವೀಣ್ ಬೆಟ್ಟಗೆರೆ ಮಾತನಾಡಿ, ಜಾಗರ ಹೋಬಳಿ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮಗಳ ಯುವಕರು ಯಾವುದೇ ಸಮಯದಲ್ಲೂ ಕರೆದರೂ ಸಹ ಒಟ್ಟಾಗಿ ಕೆಲಸ ಮಾಡಲು ಮುಂದಾಗುತ್ತಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮುನ್ನಡೆ ಕೊಡಿಸಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮುನ್ನಡೆ ಕೊಡಿಸುವುದರಲ್ಲಿ ಯಾವುದೇ ಅನುಮಾನ ಬೇಡ ಎಂದು ಭರವಸೆ ನೀಡಿದರು.
    ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನAದಸ್ವಾಮಿ, ಜಿಲ್ಲಾ ವಕ್ತಾರ ರೂಬಿನ್ ಮೊಸಸ್, ಶಿರವಾಸೆ ಗ್ರಾಪಂ ಸದಸ್ಯೆ ಪ್ರೇಮಾಕ್ಷಿ, ಕಳವಾಸೆ ಗ್ರಾಪಂ ಸದಸ್ಯ ಗಣೇಶ್, ಸಿದ್ದಾಪುರ ಗ್ರಾಪಂ ಸದಸ್ಯ ರವಿ, ಪ್ರಮುಖರಾದ ಪ್ರಣಿತ್, ಪ್ರವೀಣ್, ರಮೇಶ್, ರವಿ, ದಿನೇಶ್, ಶರತ್, ಅಶ್ವಿತ, ಆದರ್ಶ, ವಿಕ್ರಂ, ಸುದೀಪ್, ಸತೀಶ್, ರಂಜಿತ್, ನವೀನ್ ಅಶೋಕ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts