ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಸಾವು

death
Published on

ಪಡುಬಿದ್ರಿ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಮಣಿಪುರ ಗ್ರಾಮದ ಯುವತಿ ಕೀರ್ತನಾ (26) ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ.

ಬೆಳ್ಳೆ ಸಹಕಾರಿ ಸಂಘವೊಂದರಲ್ಲಿ ಕಳೆದ ಮೂರು ವರ್ಷಗಳಿಂದ ಸಹಾಯಕಿಯಾಗಿ ಕೆಲಸ ಮಾಡಿಕೊಂಡಿದ್ದ ಕೀರ್ತನಾ ಮಾನಸಿಕ ಕಾಯಿಲೆಯಿಂದ ಬಳಲುತಿದ್ದರು. ನ.10ರಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಅವರನ್ನು ಪಾಲಕರು ನೆರೆಮನೆಯವರ ಸಹಾಯದಿಂದ ರಕ್ಷಿಸಿ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net