ಹಾಸನ | ರೇಗಿಸಿದ ಯುವಕನಿಗೆ ಚಪ್ಪಲಿಯೇಟು ನೀಡಿದ ಯುವತಿ

youth
Published on

ಹಾಸನ: ನಗರದಲ್ಲಿ ಪುಂಡರ ಹಾವಳಿ ಹೆಚ್ಚಾಗುತ್ತಿದೆ ಎಂಬ ಆರೋಪದ ನಡುವೆ, ರೇಗಿಸಿದ ಯುವಕನಿಗೆ ಧರ್ಮದೇಟು ನೀಡಿ ಯುವತಿಯೊಬ್ಬಳು ತಕ್ಕಶಾಸ್ತಿ ಮಾಡಿದ್ದಾಳೆ. ಹಾಸನ ನಗರದ ಸರ್ಕಾರಿ ಆಸ್ಪತ್ರೆ ಮುಂಭಾಗ ಈ ಘಟನೆ ನಡೆದಿದೆ. ಇದನ್ನೂ ಓದಿ: ಕೊನೆಗೂ ಸಂತಾನಶಕ್ತಿಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ 13 ಮಕ್ಕಳ ತಂದೆ!

ಸರ್ಕಾರಿ ಆಸ್ಪತ್ರೆಯ ಮುಂಭಾಗ ಯುವಕ ಚುಡಾಯಿಸಿದ್ದಾನೆ. ಇದರಿಂದ ಸಿಟ್ಟಾದ ಯುವತಿ, ಚಪ್ಪಲಿಯಿಂದ ಹೊಡೆದಿದ್ದಾಳೆ. ಯುವಕ ರೇಗಿಸಿದ್ದಲ್ಲದೆ, ಯುವತಿಯ ಮೇಲೆ ಕೈ ಮಾಡಿದ್ದಾನೆ. ಕೂಡಲೇ ಎಚ್ಚೆತ್ತ ಸ್ಥಳೀಯರು ಯುವಕನ್ನು ಹಿಡಿದು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಯುವಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ನಗರ ಠಾಣೆಗೆ ಕರೆದೊಯ್ದು, ನಂತರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಿಜೆಪಿ ಟಿಕೆಟ್‌ಗಾಗಿ CPI ಹುದ್ದೆಗೆ ರಾಜೀನಾಮೆ; ನಾಗಠಾಣ ಮೀಸಲು ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net