7 ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಯುವತಿ ಗಂಡನ ಮನೆಯಲ್ಲಿ ದುರಂತ ಅಂತ್ಯ!

death
Published on

ಉತ್ತರ ಕನ್ನಡ: ನೂರಾರು ಕನಸಿನ ಬುತ್ತಿಯೊಂದಿಗೆ 7 ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಯುವತಿ ಗಂಡನ ಮನೆಯಲ್ಲಿ ದುರಂತ ಅಂತ್ಯ ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಂದಿಗದ್ದೆ ಗ್ರಾಮದಲ್ಲಿ ಸಂಭವಿಸಿದೆ.

ಯಮುನಾ ಮೃತ ದುರ್ದೈವಿ. 7 ತಿಂಗಳ ಹಿಂದೆ ವಿಘ್ನೇಶ್ವರ ಗೌಡ ಎಂಬಾತನ ಜತೆ ಮದುವೆ ಆಗಿತ್ತು. ಆದರೆ ಗಂಡನಿಗೆ ಬೇರೊಬ್ಬಳ ಜತೆ ಅಕ್ರಮ ಸಂಬಂಧ ಇತ್ತು. ಅದನ್ನು ಪ್ರಶ್ನಿಸಿದ ಯಮುನಾಗೆ ಗಂಡನ ಮನೆಯವರು ಕಿರುಕುಳ ಕೊಟ್ಟಿದ್ದರು ಎನ್ನಲಾಗಿದೆ. ಮಾನಸಿಕ ಕಿರುಕುಳದಿಂದ ಬೇಸತ್ತು ಯಮುನಾ ಗಂಡನ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ ಎಂದು ಆರೋಪಿಸಲಾಗಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net