ಆನ್‌ಲೈನ್ ವಂಚನೆಗೆ ಸಿಲುಕಿ ಯುವಕ ಆತ್ಮಹತ್ಯೆ

1 Min Read
ಆನ್‌ಲೈನ್ ವಂಚನೆಗೆ ಸಿಲುಕಿ ಯುವಕ ಆತ್ಮಹತ್ಯೆ

ಬೈಲಕುಪ್ಪೆ : ಆನ್‌ಲೈನ್ ವಂಚನೆಯಲ್ಲಿ ಸಿಲುಕಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಮೃತಪಟ್ಟಿದ್ದಾನೆ. ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಗ್ರಾಮದ ವರುಣ್(23) ಮೃತ.


ಮೃತ ವರುಣ್‌ಗೆ ಆನ್‌ಲೈನ್‌ನಲ್ಲಿ ಪರಿಚಿತನಾದ ವ್ಯಕ್ತಿಯು ಪ್ರತಿಷ್ಠಿತ ಕಂಪನಿಯಲ್ಲಿ ಉತ್ತಮ ಕೆಲಸ ಕೊಡಿಸುತ್ತೇನೆ ಎಂದು ನಂಬಿಸಿದ್ದ. ಜತೆಗೆ 24 ಸಾವಿರ ರೂ. ಪಡೆದಿದ್ದ. ಆದರೆ ಕೆಲಸ ಕೊಡಿಸದೆ ಸತಾಯಿಸುತ್ತಿದ್ದ. ಈ ಹಿನ್ನೆಲೆಯಲ್ಲಿ ಬೇಸತ್ತ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದ, ಆತನನ್ನು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ಈ ಸಂಬಂಧ ಬೈಲಕುಪ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಠಾಣಾಧಿಕಾರಿ ಜಿತೇಂದ್ರ ಕುಮಾರ್ ತನಿಖೆ ಆರಂಭಿಸಿದ್ದಾರೆ.

See also  ರಾಜಕೀಯ ಉದ್ದೇಶವಿಲ್ಲದೆ ಐಟಿ ದಾಳಿ ನಡೆಯುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
Share This Article