ರಥೋತ್ಸವದ ವೇಳೆ ಅವಘಡ: ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವು

Ratha wheel
Published on

ಚಾಮರಾಜನಗರ: ರಥೋತ್ಸವದ ವೇಳೆಯೇ ದುರಂತವೊಂದು ಸಂಭವಿಸಿದೆ. ರಥದ ಚಕ್ರದಡಿ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. 

ಗುಂಡ್ಲುಪೇಟೆ ತಾಲೂಕಿನ ಪಾರ್ವತಿ ಬೆಟ್ಟದಲ್ಲಿ ಭಾನುವಾರ ನಡೆದ ರಥೋತ್ಸವದಲ್ಲಿ ಚಕ್ರಕ್ಕೆ ಸಿಲುಕಿ ಇಬ್ಬರು ಗಾಯಗೊಂಡಿದ್ದರು. ಗಾಯಗೊಂಡ ಪೈಕಿ ಸರ್ಪಭೂಷಣ (24) ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

ರಥಧ ಚಕ್ರ ಎಳೆಯುವ ಸಂದರ್ಭದಲ್ಲಿ ರಥದ ಚಕ್ರಕ್ಕೆ ಸಿಲುಕಿದ್ದಾರೆ. ಪರಿಣಾಮ ಕಾಲು ಮುರಿದಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ. ರಥೋತ್ಸವಕ್ಕೆ ಬಂದ ಯುವಕ ರಥದ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದು ದುರಂತವೇ ಸರಿ.

ಮತ್ತೊಬ್ಬ ಮಹದೇವಣ್ಣ (35) ಎಂಬುವವರಿಗೆ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಗುಂಡ್ಲುಪೇಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net