More

    ಸಾಲಿಗ್ರಾಮ ದೇವಸ್ಥಾನದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ; ಕೆಲಸವಿಲ್ಲದೆ ಮಾನಸಿಕವಾಗಿ ಕುಗ್ಗಿ ಹೋಗಿದ್ದ..

    ಉಡುಪಿ: ಮಾನಸಿಕವಾಗಿ ನೊಂದುಕೊಂಡು ಕುಗ್ಗಿ ಹೋಗಿದ್ದ ಯುವಕನೊಬ್ಬ ದೇವಸ್ಥಾನವೊಂದರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಉಡುಪಿ ಜಿಲ್ಲೆಯ ಪಾಂಡೇಶ್ವರದ ಯಡಬೆಟ್ಟು ನಿವಾಸಿ ಸುನೀಲ್ ಮೊಗವೀರ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಉಡುಪಿ ಸಾಲಿಗ್ರಾಮದ ಗುರುನರಸಿಂಹ ದೇವಸ್ಥಾನದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಇದನ್ನೂ ಓದಿ: ಭಾರತಕ್ಕೆ ಮೊದಲ ಒಮಿಕ್ರಾನ್​ ತಂದಿಟ್ಟವ ಈಗ ದೇಶದಲ್ಲೇ ಇಲ್ಲ, ಅಸಲಿಗೆ ಆತ ಭಾರತೀಯನೇ ಅಲ್ಲ?: ಬೆಂಗ್ಳೂರಿಗೆ ಸುಮ್ನೆ ಕಳಂಕ!

    ಇಂದು ಸಾಲಿಗ್ರಾಮದ ಗುರುನರಸಿಂಹ ದೇವಸ್ಥಾನದಲ್ಲಿ ದರ್ಶನ‌ ಪಡೆದ ಬಳಿಕ ಈತ, ಅಲ್ಲಿನ ದೇವಸ್ಥಾನದ ಕೆರೆಗೆ ಹಾಕಲಾಗಿದ್ದ ಕಬ್ಬಿಣದ ಬೇಲಿಯನ್ನು ದಾಟಿ ಹಾರಿದ್ದಾನೆ. ಸ್ಥಳೀಯರು ಕೂಡಲೇ ನೆರವಿಗೆ ಧಾವಿಸಿದರೂ ಆತನನ್ನು ಉಳಿಸಿಕೊಳ್ಳಲು ಆಗಿಲ್ಲ.

    ಇದನ್ನೂ ಓದಿ: ಜೀವಾವಧಿ ಶಿಕ್ಷೆಗೊಳಗಾಗಿದ್ದವ ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ಪರಾರಿ; 3 ವರ್ಷಗಳ ಕಾಲ ಸಿಗದೇ ಇರಲು ಹೀಗೆ ಮಾಡಿದ್ದ…

    ಕೂಲಿ ಕೆಲಸ ಮಾಡಿಕೊಂಡಿದ್ದ ಸುನೀಲ್​, ಇತ್ತೀಚೆಗೆ ಕೆಲವು‌ ದಿನಗಳಿಂದ‌ ಸರಿಯಾದ ಕೆಲಸವಿಲ್ಲದೆ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಎನ್ನಲಾಗಿದೆ. ಕೋಟ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

    ದೇವಸ್ಥಾನಗಳ ಬಾಗಿಲು ಮುರಿದು ಒಳಹೊಕ್ಕು ವಿಗ್ರಹಗಳ ಧ್ವಂಸ; ಆರೋಪಿಗಳ ಬಂಧನಕ್ಕೆ ಗ್ರಾಮಸ್ಥರ ಆಗ್ರಹ

    ಎರಡನೇ ಮದ್ವೆ ಆಗಲು ಹೆಂಡ್ತಿ-ಮಕ್ಳನ್ನು ಕೊಂದ, 11 ವರ್ಷಗಳ ಬಳಿಕ ಸಿಕ್ಕಿಬಿದ್ದ; ಈತ ತಪ್ಪಿಸಿಕೊಂಡಿದ್ದು, ಬಳಿಕ ಮಾಡಿದ್ದೆಲ್ಲ ಭಾರಿ ಕಿತಾಪತಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts