More

    ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆಯುವಕನ ಹತ್ಯೆ


    ಅಫಜಲಪುರ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೋರ್ವನನ್ನು ಕೊಲೆ ಮಾಡಿದ ಘಟನೆ ಸಂಗಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಕಿಗೆ ಬಂದಿದೆ. ಜಾವೀದ್ ಚಿನ್ನಮಳ್ಳಿ (೨೭) ಹತ್ಯೆಯಾದ ಯುವಕ. ಮೇ ೭ರಂದು ಗ್ರಾಮದೆಲ್ಲೆಡೆ ತಿರುಗಾಡಿ ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದ, ಅಲ್ಲದೆ ಪಕ್ಷಕ್ಕೆ ಮತ ನೀಡುವಂತೆ ಜನರಲ್ಲಿ ಮನವಿ ಮಾಡಿದ್ದ. ಇದೊಂದು ಕಾರಣ ಸೇರಿ ರಾಜಕೀಯ ದ್ವೇಷದಿಂದ ಕೊಲೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಮೇ ೭ರಂದು ಮತದಾನ ಮುಗಿದ ಬಳಿಕ ಪಾರ್ಟಿ ನೆಪ ಹೇಳಿ ಕೆಲವರು ಜಾವೀದ್‌ನನ್ನು ಗ್ರಾಮದ ಹೊರವಲಯಕ್ಕೆ ಕರೆದುಕೊಂಡು ಹೋಗಿದ್ದಾರೆ. ಬಳಿಕ ಹತ್ಯೆಗೈದು ಬಾವಿಯಲ್ಲಿ ಎಸೆದಿದ್ದಾರೆ. ಶುಕ್ರವಾರ ಬೆಳಗ್ಗೆ ಮೃತದೇಹ ನೀರಿನಲ್ಲಿ ಕಾಣಿಸಿಕೊಂಡಿದ್ದು, ಪರಿಶೀಲಿಸಿದಾಗ ಜಾವೀದ್‌ನದ್ದು ಎಂದು ಗುರುತಿಸಲಾಗಿದೆ. ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗಾಣಗಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts