ಮಗಳನ್ನು ಪ್ರೀತಿಸುತ್ತಿದ್ದ ಯುವಕನಿಗೆ ಚಾಕುವಿನಿಂದ ಇರಿದ ತಂದೆ

Stabbed
Published on

ಧಾರವಾಡ: ಮಗಳನ್ನು ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ ಹುಡುಗಿಯ ತಮದೆಯೇ ಯುವಕನಿಗೆ ಚಾಕುವಿನಿಂದ ಇರಿದಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.

ಚಾಕು ಇರಿತಕ್ಕೆ ಒಳಗಾಗಿ ಶಶಾಂಕ್​ ಮೂಗನ್ನವರ ಗಂಭೀರವಾಗಿ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗೆಂದು ದಾಖಲಿಸಲಾಗಿದೆ.

ಘಟನೆಯೂ ಧಾರವಾಡ ಜಿಲ್ಲೆ ಉಪನಗರ ಪೊಲೀಸ್​ ಠಾಣೆ ವ್ಯಾಪ್ತಿಯ ಸೈದಾಪುರದಲ್ಲಿ ನಡೆದಿದ್ದು, ಹುಲಗಪ್ಪ ಬಡಿಗೇರ ಎಂಬಾತ ಯುವಕನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ.

Stabbed
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net