ಶಿವಮೊಗ್ಗ: ವೇಗವಾಗಿ ಗಾಡಿ ಓಡಿಸುತ್ತಿದ್ದುದ್ದನ್ನು ಪ್ರಶ್ನಿಸಿದ ವ್ಯಕ್ತಿಗೆ ಅನ್ಯಕೋಮಿನ ಯುವಕರ ಗುಂಪೊಂದು ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ದೊಡ್ಡಪೇಟೆಯಲ್ಲಿ ನಡೆದಿದೆ.

ಖಾಸಗಿ ಕಾಲೇಜಿನಲ್ಲಿ ಕಂಪ್ಯೂಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಸುಶೀಲ್ (23) ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನು ಓದಿ: ಬ್ಯಾಕ್ ಟು ಬ್ಯಾಕ್ ಶತಕ ಬಾರಿಸಿದ ನ್ಯೂಜಿಲೆಂಡ್ ಆಟಗಾರ; ಸ್ಮಿತ್ ದಾಖಲೆ ಉಡೀಸ್, ಕ್ರಿಕೆಟ್ ದಿಗ್ಗಜನ ರೆಕಾರ್ಡ್ ಸೇಫ್
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಗಾಯಾಳು ಯುವಕನನ್ನು ಸುಶೀಲ್ ಎಂದು ಗುರುತಿಸಲಾಗಿದ್ದು, ಇವರು ಕುಮುದ್ವತಿ ಕಾಲೇಜ್‌ನಲ್ಲಿ ಕಂಪ್ಯೂಟರ್ ಅಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಬೈಕ್ ನಲ್ಲಿ ವೀಲಿಂಗ್ ಮಾಡಬೇಡಿ ಎಂದು ಬುದ್ಧಿವಾದ ಹೇಳಿದ್ದಕ್ಕೆ ಅನ್ಯಕೋಮಿನ ನಾಲ್ವರು ದುಷ್ಕರ್ಮಿಗಳ ತಂಡ ಎದೆ ಹಾಗೂ ಹೊಟ್ಟೆ ಭಾಗಕ್ಕೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದ್ದು ಗಾಯಗೊಂಡಿರುವ ಯುವಕನ ಸ್ಥಿತಿ ಸ್ಥಿರವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಎಸ್ಪಿ ಜಿ.ಕೆ. ಮಿಥುನ್ ಕುಮಾರ್ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಅಗತ್ಯ ಮುನ್ನೆಚ್ಚರಿಕೆಯನ್ನು ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.