More

    ಪ್ರಜಾಪ್ರಭುತ್ವದಲ್ಲಿ ಯುವಕರ ಮತದಾನ ಅತ್ಯಮೂಲ್ಯ

    ರಾಯಚೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯುವಕರ ಮತದಾನ ಅತ್ಯಮೂಲ್ಯವಾಗಿದ್ದು, ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವ ಕೆಲಸ ಮಾಡಬೇಕು ಎಂದು ಜಿಲ್ಲಾಕಾರಿ ಚಂದ್ರಶೇಖರ ನಾಯಕ ಹೇಳಿದರು.
    ಸ್ಥಳೀಯ ಕೃಷಿ ವಿಜ್ಞಾನಗಳ ವಿವಿಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಸೋಮವಾರ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಯುವಕ, ಯುವತಿಯರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಆಮಿಷ ಮತ್ತು ಬೈಕ್ಕೆ ಒಳಗಾಗದೆ ಮತದಾನ ಮಾಡಬೇಕು ಎಂದರು.
    ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಬಿ.ನಿಖಿಲ್ ಮಾತನಾಡಿ, ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳ ಸಮನ್ವಯತೆ ಕಾಪಾಡುವ ಏಕೈಕ ಶಕ್ತಿ ಮತದಾನವಾಗಿದ್ದು, ದೇಶದ ಭವಿಷ್ಯ ಮತದಾನ ಮಾಡುವ ಸಾಮಾನ್ಯ ವ್ಯಕ್ತಿಯ ಕೈಯಲ್ಲಿರುತ್ತದೆ.
    ಶಿಕ್ಷಣ, ಉದ್ಯೋಗ ಮಾತ್ರವಲ್ಲದೇ ಮತದಾನದ ಹಕ್ಕಿನ ಮೂಲಕ ದೇಶ ನಿರ್ಮಾಣದಲ್ಲಿ ಯುವಕರ ಪಾತ್ರ ಅತ್ಯಂತ ಪ್ರಮುಖವಾಗಿದೆ. ಯುವಕರು ಹಾಕುವ ಪ್ರತಿಯೊಂದು ಮತವು ದೇಶದ ಹಿತಕ್ಕೆ ಒಂದು ಹೆಜ್ಜೆಯಾಗುತ್ತದೆ ಎಂದು ತಿಳಿಸಿದರು.
    ಕೃಷಿ ವಿಜ್ಞಾನಗಳ ವಿವಿ ಕುಲಪತಿ ಡಾ.ಎಂ.ಹನುಮಂತಪ್ಪ ಮಾತನಾಡಿ, ಯುವ ಜನಾಂಗ ಮತದಾನ ಮಾಡುವ ಮೂಲಕ ತಮ್ಮ ಶಕ್ತಿಯನ್ನು ಪ್ರದರ್ಶನ ಮಾಡಬೇಕಾಗಿದೆ. ದೇಶದ ಒಳಿತಿಗಾಗಿ ಸುಭದ್ರ ದೇಶ ನಿರ್ಮಾಣಕ್ಕಾಗಿ ಮತ ಚಲಾಯಿಸಬೇಕು ಎಂದು ಹೇಳಿದರು.
    ಕಾರ್ಯಕ್ರಮದಲ್ಲಿ ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ, ಸ್ಪೀಪ್ ಸಮಿತಿ ನೋಡಲ್ ಅಕಾರಿ ಡಾ.ಬಿ.ವೈ.ವಾಲ್ಮೀಕಿ, ವಿವಿ ಕುಲಸಚಿವ ಡಾ.ಎಂ.ವೀರನಗೌಡ, ಆಡಳಿತಾಕಾರಿ ಡಾ.ಜಾಗೃತಿ ದೇಶಮಾನೆ, ಸ್ನಾತಕೋತ್ತರ ವಿಭಾಗದ ಡೀನ್ ಡಾ.ಗುರುರಾಜ ಸುಂಕದ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts