More

    ‘ಕೈ’ ತಪ್ಪಿದ ಟಿಕೆಟ್; ಕಾರ್ಯಕರ್ತರ ಸೂಚನೆಯಂತೆ ಪಕ್ಷೇತರನಾಗಿ ಸ್ಪರ್ಧಿಸಲು ಮುಂದಾದ ವೈಎಸ್​ವಿ ದತ್ತಾ!

    ಚಿಕ್ಕಮಗಳೂರು: ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಿರುವ ವೈಎಸ್​ವಿ ದತ್ತಾಗೆ ಅವರು ಕಡೂರು ಕ್ಷೇತ್ರದಿಂದ ಸ್ಪರ್ಧಿಸುಲು ಸಜ್ಜಾಗಿದ್ದರು. ಆದರೆ ಇಂದು ಬಿಡುಗಡೆಯಾದ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲ ದತ್ತಾ ಹೆಸರು ಇರಲಿಲ್ಲ. ಇದೀಗ ಕಾಂಗ್ರೆಸ್​ನಿಂದ ಟಿಕೆಟ್ ಕೈತಪ್ಪುತ್ತಿದ್ದಂತೆ ವೈಎಸ್​ವಿ ದತ್ತಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಜ್ಜಾಗಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.

    ಇದನ್ನೂ ಓದಿ: ಏ. 9 ರಂದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ | ಗೆಲ್ಲುವ ಪಕ್ಷವಾದ್ದರಿಂದ ಟಿಕೆಟ್​ಗಾಗಿ ಪೈಪೋಟಿ ಸಹಜ; ಸಿಎಂ ಬೊಮ್ಮಾಯಿ

    ಪಕ್ಷೇತರ ಅಭ್ಯರ್ಥಿಯಾಗಿ ವೈಎಸ್ ವಿ ದತ್ತ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಕಾರ್ಯಕರ್ತರ ಸಭೆಯಲ್ಲಿ ಸ್ಪರ್ಧೆ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದೆ. ಅಪ್ತರು ಹಾಗೂ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ವೈಎಸ್​ವಿ ದತ್ತಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ.

    ಟಿಕೆಟ್ ತಪ್ಪಿದ ಹಿನ್ನೆಲೆ ದತ್ತಾ ಅವರ ಬೆಂಬಲಿಗರು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸದ್ಯ ವೈಎಸ್​ವಿ ದತ್ತಾ ಅವರು ಒಪ್ಪಿಗೆ ನೀಡಿದ್ದು, ಅವರ ನಿರ್ಧಾರಕ್ಕೆ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

    ಇದನ್ನೂ ಓದಿ: ವಿಜಯಪುರ | 70 ಅಡಿ ಎತ್ತರದ ರಥದ ಮೇಲಿಂದ ಬಿದ್ದು ವ್ಯಕ್ತಿ ಮೃತ್ಯು

    ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕುರಿತಾಗಿ ವೈಎಸ್​ವಿ ದತ್ತಾ ಮಾತನಾಡಿದ್ದಾರೆ ಎನ್ನಲಾಗಿದ್ದ ಆಡಿಯೋವೊಂದು ಈ ಹಿಂದೆ ವೈರಲ್ ಆಗಿತ್ತು. ಇದು ಸಾಕಷ್ಟು ವಿರೋಧಕ್ಕೆ ಕಾರಣವಾಗಿತ್ತು. ಇದರಿಂದಾಗಿ ವೈಎಸ್​ವಿ ದತ್ತಾ ಅವರಿಕೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದೆ ಎಂದು ಅಂದಾಜಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts