More

    ಯುವನಿಧಿ ನೋಂದಣಿ ಡಿ.26 ರಿಂದ ಆರಂಭ: ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ 

    ಗದಗ: ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ “ಯುವನಿಧಿ” ಯೋಜನೆಗೆ ಅರ್ಹ ಫಲಾನುಭವಿಗಳು  ಡಿಸೆಂಬರ್ 26 ರಿಂದ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ. ಎಲ್ ಅವರು ತಿಳಿಸಿದ್ದಾರೆ.

    ಈ ಕುರಿತು ಪ್ರಕಟಣೆ ನೀಡಿರುವ ಅವರು, ಗದಗ ಜಿಲ್ಲೆಯಲ್ಲಿ 2023 ರ ವರ್ಷದಲ್ಲಿ ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ಪದವೀಧರರು ಮತ್ತು ಡಿಪ್ಲೋಮಾ ಪಡೆದ ನಿರುದ್ಯೋಗಿ ವಿದ್ಯಾವಂತರಿಗೆ ಕರ್ನಾಟಕ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆಯನ್ನು ಪಾವತಿಸಲಾಗುವುದು.

    ಡಿಸೆಂಬರ್ 26 ರಿಂದ ಸೇವಾಸಿಂಧು ಪೋರ್ಟಲ್ ಮೂಲಕ  ಈ ಯೋಜನೆಗೆ ಅರ್ಜಿಗಳನ್ನು ಸಲ್ಲಿಸಬಹುದು. ಜನವರಿ 2024 ರಿಂದ ಯೋಜನೆ ಜಾರಿಗೊಳ್ಳಲಿದ್ದು, ಅರ್ಹ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ದೊರೆಯಲಿದೆ. ಪಧವೀದರರಿಗೆ ರೂ 3000/- ಮಾಸಿಕ ನಿರುದ್ಯೋಗ ಭತ್ಯೆಯನ್ನು ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ 1500/- ಮಾಸಿಕ ನಿರುದ್ಯೋಗ ಭತ್ಯೆಯನ್ನು ಆಧಾರ್ ಜೋಡಣೆಯ ಅಭ್ಯರ್ಥಿಗಳಿಗೆ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

     ಯುವ ನಿಧಿ ನೋಂದಣಿಗೆ ಚಾಲನೆ:ಯುವನಿಧಿ ಯೋಜನೆಗೆ ದಿ: 26-12-2023 ರ ಮಂಗಳವಾರದಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲನಲ್ಲಿ ಮುಖ್ಯಮಂತ್ರಿಗಳ ಘನ ಉಪಸ್ಥಿತಿಯಲ್ಲಿ ಹಾಗೂ ಇತರೆ ಎಲ್ಲಾ ಸಚಿವ ಸಂಪುಟದ ಸಚಿವರುಗಳು, ವಿಧಾನ ಸಭಾ ಸದಸ್ಯರುಗಳು, ವಿಧಾನ ಪರಿಷತ್ ಸದಸ್ಯರುಗಳು ಮತ್ತು ಇತರೆ ಗಣ್ಯ ಮಾನ್ಯರುಗಳ ಉಪಸ್ಥಿತಿಯಲ್ಲಿ ನೋಂದಣಿ ಪ್ರಕಿಯೆ ಚಾಲನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

     ನೋಂದಣಿ ಪ್ರಕ್ರಿಯೆ:ಅರ್ಹ ನಿರುದ್ಯೋಗಿಗಳು ಸೇವಾಸಿಂಧು ಪೋರ್ಟಲ್ https://sevasindhugs.karnataka.gov.in ಗೆ‌ ಭೇಟಿ ನೀಡಿ ನೋಂದಣಿ‌ ಮಾಡಬಹುದು.  ಇದಲ್ಲದೇ ಕರ್ನಾಟಕ‌ ಒನ್, ಗ್ರಾಮ‌ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಕೂಡ ಅರ್ಜಿ ಸಲ್ಲಿಸಬಹುದು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts