ವಿಟ್ಲ: ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ವತಿಯಿಂದ ಸ್ವಾಮೀ ವಿವೇಕಾನಂದ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮ ಜಯಂತಿಯ ಅಂಗವಾಗಿ ಹಿಂದು ಯುವ ಸಮಾವೇಶ ಫೆ.೨೩ರಂದು ೩.೩೦ಕ್ಕೆ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿದೆ. ಇದಕ್ಕೂ ಮೊದಲು ಜೈನ ಬಸದಿಯಿಂದ ಪಂಚಲಿಂಗೇಶ್ವರ ದೇವಸ್ಥಾನದವರೆಗೆ ಮೆರವಣಿಗೆ ನಡೆಯಲಿದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿಭಾಗ ಪ್ರಮುಖ ಕೇಶವ ಬಂಗೇರ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.