ರಾಜ್ಯ ಸರ್ಕಾರದ ವಿರುದ್ಧ ಯುವಮೋರ್ಚಾ ಪ್ರತಿಭಟನೆ

protest

ಶಿವಮೊಗ್ಗ:ರಾಜ್ಯ ಸರ್ಕಾರ ಆಡಳಿತ ನಡೆಸುವಲ್ಲಿ ಸಂಪೂರ್ಣ ವೈಫಲ್ಯವಾಗಿದೆ. ಶಾಂತಿ ಸುವ್ಯವಸ್ಥೆ ಹದಗೆಟ್ಟಿದೆ. ಚುನಾವಣಾಪೂರ್ವದಲ್ಲಿ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಜನರ ಜೇಬಿಗೆ ಹೊರೆಯಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮಂಗಳವಾರ ಶಿವಪ್ಪನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಇದೊಂದು ಪಿಕ್‌ಪಾಕೆಟ್ ಸರ್ಕಾರ. ಭಾಗ್ಯಗಳನ್ನು ನೀಡುವ ಸಮಯದಲ್ಲಿ ಜನರಿಂದ ಹೆಚ್ಚುವರಿಯಾಗಿ ತೆರಿಗೆ ವಸೂಲಿ ಮಾಡುತ್ತಿದೆ. ಮಹಿಳೆಯರಿಗೆ ಗ್ಯಾರಂಟಿ ತಲುಪಿಸುವುದಕ್ಕಾಗಿ ಬೇರೆ ಯೋಜನೆಗಳ ಹಣ ಬಳಕೆಯಾಗುತ್ತಿದೆ. ಇದರಿಂದ ಆರ್ಥಿಕ ವ್ಯವಸ್ಥೆ ಹಾಳಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.
ಆಸ್ತಿ ನೋಂದಣಿ ಶುಲ್ಕ ಹೆಚ್ಚಿದೆ. ರೈತ ವಿದ್ಯಾನಿಧಿ ಸ್ಥಗಿತಗೊಳಿಸಲಾಗಿದೆ. ವಿದ್ಯುತ್ ದರ ಹೆಚ್ಚಳವಾಗಿದೆ. ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ರೈತರು ಹೆಚ್ಚು ಹಣ ಪಾವತಿಸಬೇಕಾಗಿದೆ. ರಾಜ್ಯ ಸರ್ಕಾರದ ಪಾಲಿನ ಕೃಷಿ ಸಮ್ಮಾನ್ ಸ್ಥಗಿತಗೊಳಿಸುವ ಮೂಲಕ ರೈತ ವಿರೋಧಿ ನೀತಿ ಅನುಸರಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಶಾಂತ್ ಕುಕ್ಕೆ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಮುಖರಾದ ರಾಹುಲ್ ಬಿದರೆ ಮುಂತಾದವರಿದ್ದರು.

Share This Article

World Arthritis Day: ಸಂಧಿವಾತ ಕಾಯಿಲೆಗೆ ಚಿಕಿತ್ಸೆಯೇ ಮದ್ದು! ತಜ್ಞವೈದ್ಯೆ ಡಾ. ಅರ್ಚನಾ ಎಂ. ಉಪ್ಪಿನ ಅಭಿಮತ

ಪ್ರಸ್ತುತ ದಿನಗಳಲ್ಲಿ ಬಿಪಿ-ಶುಗರ್ ಸಮಸ್ಯೆಯಂತೆ ಅರ್ಥರೈಟಿಸ್ ( Arthritis ) , ರುಮಾಟಾಲಜಿ (ಸಂಧಿವಾತ/ ಕೀಲುವಾಯು)…

Skin care: ಕಣ್ಣುಗಳ ಕೆಳಗಿರುವ ಚರ್ಮ ಸುಕ್ಕುಗಟ್ಟಿದೆಯೇ? ಹೀಗೆ ಮಾಡಿ..

ಕಣ್ಣುಗಳು(Skin care) ಸೂಕ್ಷ್ಮ ಅಂಗಗಳಾಗಿದ್ದು, ಅವುಗಳ ಕೆಳಗಿರುವ ಚರ್ಮವು ಸಹ ಸೂಕ್ಷ್ಮವಾಗಿರುತ್ತದೆ. ಬಿಸಿಲು, ಪೌಷ್ಠಿಕ ಆಹಾರದ…

Health Tips : ಮೆಟ್ಟಿಲು ಹತ್ತುವಾಗ ಸುಸ್ತಾಗುತ್ತದಾ..! ಈ ಸಲಹೆಗಳನ್ನು ಅನುಸರಿಸಿ

ಬೆಂಗಳೂರು: ಮೆಟ್ಟಿಲು ಹತ್ತುವಾಗ ಉಸಿರಾಟದ ತೊಂದರೆ ಸಾಮಾನ್ಯ. ಈ ಸಮಸ್ಯೆಯು ವಯಸ್ಸಾದಂತೆ ಹೆಚ್ಚಾಗುತ್ತಿದೆ, ಆದರೆ ಇತ್ತೀಚಿನ…