ಯಾದಗಿರಿ : ಕರ್ನಾಟಕ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ 2022-23, 2023-24ನೇ ಸಾಲಿನ ಸ್ನಾತಕ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಪದವಿಯಲ್ಲಿ ತೇರ್ಗಡೆಯಾಗಿ ಉದ್ಯೋಗ ಸಿಗದ ಅರ್ಹ ಅಭ್ಯರ್ಥಿಗಳಿಗೆ ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಯಾದಗಿರಿ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ತಿಳಿಸಿದ್ದಾರೆ.
sevasindhugs.karnataka.gov.in ಸೇವಾಸಿಂಧು ವೆಬ್‌ಪೋರ್ಟ್ಲ್‌ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು 2025ರ ಜನವರಿ 6 ರಿಂದ 20ರ ವರೆಗೆ ವಿಶೇಷ ನೋಂದಾಣಿ ಅಭಿಯಾನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಯಾದಗಿರಿಯಲ್ಲಿ ಏರ್ಪಡಿಸಿದೆ. ಅರ್ಹ ಫಲಾನುಭವಿಗಳು ಈ ಸದಾವಕಾಶವನ್ನು ಉಪಯೋಗಿಸಿಕೊಂಡು ಇದರ ಪ್ರಯೋಜನೆಯನ್ನು ಪಡೆದುಕೊಳ್ಳಬೇಕು, ಪದವಿಧರರಿಗೆ ಪ್ರತಿ ತಿಂಗಳ 3000 ರೂ.ಗಳ ಹಾಗೂ ಡಿಪ್ಲೋಮಾ ಪದವಿಧರರಿಗೆ 1500 ರೂ.ಗಳ ನೀರುದ್ಯೋಗಿ ಭತ್ಯೆಯನ್ನು ನೀಡಲಾಗುತ್ತದೆ. ಫಲಿತಾಂಶದ ನಂತರ ನೀರುದ್ಯೋಗಿಗಳಾಗಿ 180 ದಿವಸಗಳ ಪೂರೈಸಿ ಹೆಸರನ್ನು ನೋಂದಾಯಿಸಿಕೊAಡು ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ.
ನಂತರ ಪ್ರತಿ ತಿಂಗಳು ಯುವನಿಧಿ ಯೋಜನೆಯ ಪ್ರಯೋಜನವನ್ನು ಪಡೆಯಬೇಕಿದ್ದರೆ, ಸೇವಾಸಿಂಧು ವೆಬ್ ಪೋರ್ಟ್ಲ್‌ನಲ್ಲಿ ಮಾಹೆಯಾನ ತಾನು ನೀರುದ್ಯೋಗಿಯೆಂದು ಉನ್ನತ ವ್ಯಾಸಂಗ ಮುಂದುವರಿಸಿರುವುದಿಲ್ಲವೆAದು ಹಾಗೂ ಸ್ವಯಂ ಉದ್ಯೋಗಿಯಲ್ಲವೆಂದು ಪ್ರತಿ ತಿಂಗಳ 25ನೇ ತಾರೀಖಿನ ಒಳಗೆ ಸ್ವಯಂ ಫೋಷಣೆಯನ್ನು ಮಾಡಬೇಕಾಗಿರುವುದು ಕಡ್ಡಾಯವಾಗಿರುತ್ತದೆ, ಸ್ವಯಂ ಘೋಷಣೆಯ ಆಧಾರದ ಮೇಲೆ ಅಭ್ಯರ್ಥಿಗಳು ಮುಂದಿನ ಪಾವತಿಯನ್ನು ಸ್ವೀಕರಿಸಲಾಗುವುದು. ಅಭ್ಯರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಕೇಂದ್ರಗಳಲ್ಲಿ ಯುವನಿಧಿ ಯೋಜನೆಗೆ ಅರ್ಜಿಸಲ್ಲಿಸಬೇಕು, ಅರ್ಜಿಸಲ್ಲಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಆಧಾರ್ ಕಾರ್ಡ್ (ಸಿಡೆಡ್), ಬ್ಯಾಂಕ್ ಖಾತೆ, ಹಾಗೂ ಆಧಾರ್ ಲಿಂಕ್ಡ್ ಮೊಬೈಲ್ ನಂಬರನ್ನು ಹೊಂದಿರಬೇಕು, ಅರ್ಜಿಸಲ್ಲಿಸಿದ ನಂತರ ಸೇವಾಸಿಂಧು ಪೋರ್ಟ್ಲ್‌ನಲ್ಲಿ ತಮ್ಮ ಅರ್ಜಿಯು ಯಾವ ಹಂತದಲ್ಲಿ ಇದೆ ಎಂಬುದನ್ನು ಪರಿಶೀಲಿಸಿಕೊಂಡು, ಒಂದು ವೇಳೆ ಅರ್ಜಿಯ ನೋಂದಾಣಿಯಾಗದಿದ ಸಂದರ್ಭದಲ್ಲಿ ಸೂಚಿಸಲ್ಪಟ್ಟ ಇಲಾಖೆಯ ಕಛೇರಿಗಳಿಗೆ ತಮ್ಮ ಎಲ್ಲಾ ಮೂಲ ಅಂಕಪಟ್ಟಿ ಹಾಗೂ ಇತರೆ ಪ್ರಮಾಣ ಪತ್ರಗಳೊಂದಿಗೆ ಖುದ್ದಾಗಿ ಭೇಟಿ ನೀಡಿ ನೋಂದಾಣಿ ಮಾಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1800 599 7154, ಜಿಲ್ಲಾ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಯಾದಗಿರಿ ದೂ.ಸಂ.08473253718ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.