ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ಕರ್ನಾಟಕ ಯುವನಿಧಿ ಯೋಜನೆ ಅನುಷ್ಠಾನ ಸಲುವಾಗಿ ಸರ್ಕಾರ ಇಂದು ಆದೇಶ ಹೊರಡಿಸಿದೆ.
ರಾಜ್ಯದಲ್ಲಿ 2022-23ರಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3000 ರೂ., ಡಿಪ್ಲೊಮಾ ಹೊಂದಿದ ನಿರುದ್ಯೋಗಿಗಳಿಗೆ ಮಾಸಿಕ 1500 ರೂಪಾಯಿಯಂತೆ ನಿರುದ್ಯೋಗ ಭತ್ಯೆ ನೀಡುವ “ಯುವ ನಿಧಿ ಯೋಜನೆ” ಜಾರಿಗೊಳಿಸಲು ಸರ್ಕಾರವು ಇಂದು ತಾತ್ವಿಕ ಅನುಮೋದನೆ ನೀಡಿ ಆದೇಶಿಸಿದೆ. ಯೋಜನೆ ಅನುಷ್ಠಾನಗೊಳಿಸಲು ಷರತ್ತು, ನಿಬಂಧನೆಗಳು ಹಾಗೂ ಅನರ್ಹತೆಯ ಮಾನದಂಡಗಳನ್ನು ವಿಧಿಸಿ ಆದೇಶ ಹೊರಡಿಸಲಾಗಿದೆ.
2023ರ ವರ್ಷದಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್‌ಗಳು ಸೇರಿದಂತೆ) ಪ್ರತಿ ತಿಂಗಳು 3000 ರೂ. ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೊಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 1500 ರೂ. ನಿರುದ್ಯೋಗ ಭತ್ಯೆ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ನೀಡಲು “ಯುವ ನಿಧಿ ಯೋಜನೆ”ಯನ್ನು ಷರತ್ತಿಗೊಳಪಟ್ಟು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಮಾಡಲಾಗಿದೆ.
ಇದನ್ನೂ ಓದಿ: ವೀರ ಸಾವರ್ಕರ್ ಹೆಸರಿನ ಕಾರ್ಯಕ್ರಮಕ್ಕೆ ಸರ್ಕಾರದಿಂದ ತಡೆ?; ಕೊನೆಗೂ…
ಷರತ್ತು ಮತ್ತು ನಿಬಂಧನೆಗಳು
1. ಪದವಿ/ಡಿಪ್ಲೊಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೆ ಇರುವ ಕನ್ನಡಿಗರಿಗೆ (Domicile of Karnataka) ಮಾತ್ರ ಈ ಯೋಜನೆ ಅನ್ವಯವಾಗುತ್ತದೆ.
2. ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯ ಸ್ಥಗಿತಗೊಳಿಸಲಾಗುವುದು.
3. ಭತ್ಯೆಯನ್ನು ಡಿಬಿಟಿ ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು.
4. ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.
ಯೋಜನೆಗೆ ಅರ್ಹರಲ್ಲದವರು
1. ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರಿಸುವವರು.
2. ಶಿಶಿಕ್ಷು (Apprentice) ವೇತನ ಪಡೆಯುತ್ತಿರುವವರು.
3. ಸರ್ಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು.
4. ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿರುವವರು.
ಕಾಂಗ್ರೆಸಿಗರಿಂದ ಕಾನೂನು ಕಿರುಕುಳ; ಬಿಜೆಪಿ ಕಾರ್ಯಕರ್ತರಿಗಾಗಿ ಹೆಲ್ಪ್ಲೈನ್: ಸಂಸದ ತೇಜಸ್ವಿ ಸೂರ್ಯ
ಒಬ್ಬ ಮಗನ ಚಿಕಿತ್ಸೆಗಾಗಿ ಇನ್ನೊಬ್ಬ ಮಗನನ್ನು ಮಾರಲೆತ್ನಿಸಿದ ತಂದೆ; ಪತಿ ವಿರುದ್ಧ ಪತ್ನಿಯ ದೂರು